ವಿರುದುನಗರ (ತಮಿಳುನಾಡು) : ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟಾಕಿ ತಯಾರಿಕೆ ವೇಳೆ ರಾಸಾಯನಿಕ ಬೆರೆಸುವ ಪ್ರಕ್ರಿಯೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇದರಿಂದ ಕಾರ್ಖಾನೆಯ ಒಂದು ಕೊಠಡಿ ಧ್ವಂಸವಾಗಿದೆ. ಬೆಂಕಿ ಹೊತ್ತಿಕೊಂಡ ಕಾರಣ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: 'ನನಗಾಗಿ ಐಷಾರಾಮಿ ಬಂಗಲೆ ಕಟ್ಟಿಕೊಂಡಿಲ್ಲ, ಬಡವರಿಗಾಗಿ 4 ಕೋಟಿ ಸೂರು ನಿರ್ಮಿಸಿದ್ದೇವೆ': ಕೇಜ್ರಿವಾಲ್ಗೆ ಮೋದಿ ಟಾಂಗ್