ETV Bharat / bharat

ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್ ಇಮಾಮ್​ಗೆ ಜಾಮೀನು - Sharjeel Imam granted bail - SHARJEEL IMAM GRANTED BAIL

ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ.

ಶರ್ಜೀಲ್ ಇಮಾಮ್
ಶರ್ಜೀಲ್ ಇಮಾಮ್ (IANS image)
author img

By ETV Bharat Karnataka Team

Published : May 29, 2024, 1:26 PM IST

ನವದೆಹಲಿ : 2020ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರಿಗೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ದೇಶದ್ರೋಹ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲಾದ ಆರೋಪಗಳನ್ನು ಕೂಡ ಈ ಪ್ರಕರಣದಲ್ಲಿ ಅವರ ಮೇಲೆ ಹೊರಿಸಲಾಗಿದೆ.

ಅಪರಾಧ ಸಾಬೀತಾದರೆ ತನಗೆ ನೀಡಬಹುದಾದ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಶಿಕ್ಷೆಯನ್ನು ಈಗಾಗಲೇ ಅನುಭವಿಸಿದ್ದರೂ ಜಾಮೀನು ನೀಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಇಮಾಮ್ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ನ್ಯಾಯಪೀಠವು ಇಮಾಮ್ ಮತ್ತು ದೆಹಲಿ ಪೊಲೀಸರ ವಕೀಲರ ವಾದವನ್ನು ಆಲಿಸಿದ ನಂತರ, ಇಮಾಮ್ ಅವರ ಮನವಿಯನ್ನು ಒಪ್ಪಲಾಗಿದೆ ಎಂದು ಹೇಳಿತು.

ಪ್ರಾಸಿಕ್ಯೂಷನ್ ಪ್ರಕಾರ, ಇಮಾಮ್ 2019 ರ ಡಿಸೆಂಬರ್ 13 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಡಿಸೆಂಬರ್ 16, 2019 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ದ್ವೇಷ ಭಾಷಣ ಮಾಡಿದ್ದರು. ಭಾಷಣದಲ್ಲಿ ಅವರು ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳನ್ನು ದೇಶದಿಂದ ಬೇರ್ಪಡಿಸುವುದಾಗಿ ಬೆದರಿಕೆ ಹಾಕಿದ್ದರು.

ದೆಹಲಿ ಪೊಲೀಸರ ವಿಶೇಷ ಶಾಖೆ ದಾಖಲಿಸಿದ ದೂರಿನ ಪ್ರಕಾರ ಇಮಾಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ದೇಶದ್ರೋಹದ ಅಪರಾಧಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತಾದರೂ, ನಂತರ ಯುಎಪಿಎಯ ಸೆಕ್ಷನ್ 13 ಅನ್ನು ಅನ್ವಯಿಸಲಾಯಿತು. ಈ ಪ್ರಕರಣದಲ್ಲಿ ಅವರು ಜನವರಿ 28, 2020 ರಿಂದ ಬಂಧನದಲ್ಲಿದ್ದಾರೆ.

ತಾನು ಕಳೆದ ನಾಲ್ಕು ವರ್ಷಗಳಿಂದ ಕಸ್ಟಡಿಯಲ್ಲಿದ್ದೇನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಅಡಿಯಲ್ಲಿನ ಅಪರಾಧಕ್ಕೆ ಗರಿಷ್ಠ 7 ವರ್ಷ ಶಿಕ್ಷೆ ವಿಧಿಸಬಹುದು ಎಂದು ಇಮಾಮ್ ವಿಚಾರಣಾ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದರು. ಸಿಆರ್​ಪಿಸಿ ಸೆಕ್ಷನ್ 436-ಎ ಪ್ರಕಾರ, ಒಬ್ಬ ವ್ಯಕ್ತಿಯು ಅಪರಾಧಕ್ಕೆ ನಿಗದಿಪಡಿಸಿದ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಸಮಯವನ್ನು ಜೈಲಿನಲ್ಲಿ ಕಳೆದಿದ್ದರೆ ಆತನನ್ನು ಬಂಧನದಿಂದ ಬಿಡುಗಡೆ ಮಾಡಬಹುದು.

ಫೆಬ್ರವರಿ 17 ರಂದು ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. "ಅಸಾಧಾರಣ ಸಂದರ್ಭಗಳಲ್ಲಿ" ಆರೋಪಿಯ ಕಸ್ಟಡಿಯನ್ನು ಮತ್ತಷ್ಟು ವಿಸ್ತರಿಸಬಹುದು ಎಂದು ವಿಚಾರಣಾ ನ್ಯಾಯಾಲಯ ಆಗ ತೀರ್ಪು ನೀಡಿತ್ತು.

ಇದನ್ನೂ ಓದಿ : ಇಡಿ ಅಧಿಕಾರಿಗಳ ಮೇಲೆ ದಾಳಿ: ಸಂದೇಶ್‌ಖಾಲಿ ಡಾನ್ ಷಹಜಹಾನ್ ವಿರುದ್ಧ ಕೊಲೆ ಯತ್ನ ಆರೋಪ ಹೊರಿಸಿದ ಸಿಬಿಐ - CBI CHARGE SHEET

ETV Bharat Logo

Copyright © 2024 Ushodaya Enterprises Pvt. Ltd., All Rights Reserved.