ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಸಿಬಿಐ ಎಫ್‌ಐಆರ್ ಪ್ರಶ್ನಿಸಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಎಸ್. ಸಿ. ಶರ್ಮಾ ಅವರ ಪೀಠವು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಒಲವು ಹೊಂದಿಲ್ಲ. ಕ್ಷಮಿಸಿ ಎಂದು ಹೇಳುವ ಮೂಲಕ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಸಿಬಿಐ ಎಫ್‌ಐಆರ್ ಪ್ರಶ್ನಿಸಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ" ಎಂದು ನ್ಯಾಯ ಪೀಠ ಹೇಳಿದೆ.
2023ರ ಅಕ್ಟೋಬರ್ 19ರಂದು ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಶಿವಕುಮಾರ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹೈಕೋರ್ಟ್ ನಿರ್ದೇಶನ ನೀಡಿದೆ.
ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯದ ಮೂಲಗಳಿಗೆ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪ ಮಾಡಿತ್ತು. ಈ ಅವಧಿಯಲ್ಲಿ ಅವರು ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. 2020ರ ಸೆಪ್ಟೆಂಬರ್ 3ರಂದು ಎಫ್‌ಐಆರ್ ಅನ್ನು ಸಿಬಿಐ ದಾಖಲಿಸಿದೆ. ಶಿವಕುಮಾರ್ ಅವರು 2021ರಲ್ಲಿ ಎಫ್‌ಐಆರ್ ಅನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.