ETV Bharat / bharat

ಪಿಎಂ ಕಿಸಾನ್ ಯೋಜನೆಯಡಿ 11.8 ಕೋಟಿ ರೈತರಿಗೆ ವರ್ಷಕ್ಕೆ ₹ 6 ಸಾವಿರ ಆರ್ಥಿಕ ನೆರವು - PM KISAN Yojana

PM KISAN Yojana; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮಂಡಿಸಿದ ಮಧ್ಯಂತರ ಬಜೆಟ್​ನಲ್ಲಿ ಪಿಎಂ ಕಿಸಾನ್​ ಸಮ್ಮಾನ್​ ಯೋಜನೆಯಡಿ 11.8 ಕೋಟಿ ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪಿಎಂ ಕಿಸಾನ್ ಯೋಜನೆ
ಪಿಎಂ ಕಿಸಾನ್ ಯೋಜನೆ
author img

By PTI

Published : Feb 1, 2024, 12:54 PM IST

ನವದೆಹಲಿ: ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆಯಾದ (ಡಿಬಿಟಿ) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11.8 ಕೋಟಿ ರೈತರು ಲಾಭ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ರೈತರಿಗೆ ಬೆಳೆ ಬೆಳೆಯಲು ಅನುಕೂಲವಾಗಲಿ ಎಂದು ಸರ್ಕಾರ ಈ ಆರ್ಥಿಕ ನೆರವು ನೀಡುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್​ನಲ್ಲಿ ಗುರುವಾರ ಹೇಳಿದರು.

ಪಿಎಂ ಕಿಸಾನ್​ ಸಮ್ಮಾನ್​ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಕಳೆದ ಬಾರಿಗಿಂತಲೂ ಅಧಿಕ ರೈತರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಯೋಜನೆಯಡಿ ದೇಶದ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ವರ್ಷದಲ್ಲಿ ಮೂರು ಕಂತುಗಳಲ್ಲಿ 2 ಸಾವಿರದಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಸರ್ಕಾರ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತಿದೆ. 2019 ರ ಫೆಬ್ರವರಿಯಲ್ಲಿ ಮಂಡಿಸಲಾದ ಮಧ್ಯಂತರ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಡಿಸೆಂಬರ್ 2018 ರಿಂದಲೇ ಪೂರ್ವಾನ್ವಯವಾಗುವಂತೆ ಯೋಜನೆಯನ್ನು ಜಾರಿಗೆ ತರಲಾಯಿತು.

9 ಸಾವಿರಕ್ಕೆ ಹೆಚ್ಚಳ ನಿರೀಕ್ಷೆ ಹುಸಿ: ಬಜೆಟ್​ ಮಂಡನೆಗೂ ಮೊದಲು 6 ಸಾವಿರ ರೂಪಾಯಿ ಇರುವ ಪಿಎಂ ಕಿಸಾನ್​ ಸಮ್ಮಾನ್​ ಮೊತ್ತವನ್ನು 9 ಸಾವಿರಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂಬ ವರದಿ ಹರಿದಾಡಿತ್ತು. ಆದರೆ, ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇದಕ್ಕೂ ಮೊದಲು 10 ಕೋಟಿ ರೈತರು ಯೋಜನೆಯಡಿ ನೋಂದಾಯಿಸಿಕೊಂಡಿದ್ದರು. ಇದೀಗ ಆ ಸಂಖ್ಯೆ 11 ಕೋಟಿಯನ್ನು ದಾಟಿದೆ.

ಇದನ್ನೂ ಓದಿ: PM Kisan Samman: 81 ಸಾವಿರ ರೈತರು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯಿಂದ ಔಟ್​.. ಅನರ್ಹರಿಗೆ ಶಾಕ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.