ETV Bharat / bharat

ಸೀಟು ಹಂಚಿಕೆಯ ಮಾತುಕತೆ ಬಳಿಕವೇ ನ್ಯಾಯ್​ ಯಾತ್ರೆಯಲ್ಲಿ ಭಾಗಿ: ಅಖಿಲೇಶ್ ಯಾದವ್ ಷರತ್ತು - ನ್ಯಾಯ್ ಯಾತ್ರೆ

ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್​ ಜೋಡೊ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್ ಕೆಲವು ಷರತ್ತುಗಳನ್ನು ಹಾಕಿರುವುದಾಗಿ ಪಕ್ಷ ತಿಳಿಸಿದೆ.

ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
author img

By ETV Bharat Karnataka Team

Published : Feb 19, 2024, 7:18 PM IST

ಲಕ್ನೋ (ಉತ್ತರ ಪ್ರದೇಶ): ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ಪ್ರವೇಶಿಸಿದ್ದು ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಸೂತ್ರ ಅಂತಿಮಗೊಳ್ಳುವವರೆಗೆ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ. ಇದಕ್ಕೆ ಪರಿಹಾರ ಕಂಡುಕೊಂಡ ಬಳಿಕವಷ್ಟೇ ಯಾತ್ರೆಯಲ್ಲಿ ಪಾಲ್ಗೊಳ್ಳಲಾಗುತ್ತದೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಈ ಷರತ್ತುಗಳ ಬಗ್ಗೆ ಪಕ್ಷ ಖಚಿತಪಡಿಸಿದೆ. ''ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 15 ಸ್ಥಾನಗಳನ್ನು ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಸೀಟು ಹಂಚಿಕೆಯ ಮಾತುಕತೆ ಅಂತಿಮಗೊಂಡ ನಂತರವಷ್ಟೇ ಸಮಾಜವಾದಿ ಪಕ್ಷವು ನ್ಯಾಯ್​ ಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ. ಅಮೇಥಿಯಲ್ಲಿ ನಡೆಯುವ ಯಾತ್ರೆಯ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಜರಾಗಬಾರದು ಎಂಬ ಸೂಚನೆ ನೀಡಲಾಗಿದೆ'' ಎಂದು ಪಕ್ಷ ತಿಳಿಸಿದೆ.

"ಸೀಟು ಹಂಚಿಕೆ ಕುರಿತು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಈಗಾಗಲೇ ಮಾತುಕತೆ ನಡೆದಿದೆ. ಅಭ್ಯರ್ಥಿಗಳ ಪಟ್ಟಿಯೊಂದಿಗೆ ಪ್ರತಿ ಹಂತದಲ್ಲೂ ಒನ್​ ಟು ಒನ್ ಮಾತುಕತೆ ನಡೆಸಲಾಗುವುದು. ಶೀಘ್ರದಲ್ಲೇ ಸೀಟು ಹಂಚಿಕೆ ಬಗ್ಗೆಗೂ ಚರ್ಚೆ ನಡೆಯಲಿದೆ ಎಂಬ ವಿಶ್ವಾಸ ಇದೆ. ಇದಾದ ನಂತರ ಸಮಾಜವಾದಿ ಪಕ್ಷವು ಕಾಂಗ್ರೆಸ್ ನ್ಯಾಯ ಯಾತ್ರೆಗೆ ಸೇರುತ್ತದೆ" ಎಂದು ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅಖಿಲೇಶ್, ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರಪ್ರದೇಶದಲ್ಲಿ ಯಶಸ್ವಿಯಾಗಿ ಸಾಗಲಿ. ಖುದ್ದು ರಾಯ್ ಬರೇಲಿ ಅಥವಾ ಅಮೇಥಿಯಲ್ಲಿ ಸಾಗುವ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು. ಯಾತ್ರೆ ಇಂದು ಅಮೇಥಿಯಲ್ಲಿ, ಮಂಗಳವಾರ ರಾಯ್ ಬರೇಲಿ ತಲುಪಲಿದೆ. ಅಮೇಥಿ ವಿಧಾನಸಭೆಯ ಕಕ್ವಾ ಗೌರಿಗಂಜ್, ಗಾಂಧಿ ನಗರ, ಜೈಸ್, ಫುರ್ಸತ್‌ಗಂಜ್ ಮೂಲಕ ಮಹಾರಾಜಪುರ ಮೂಲಕ ರಾಯ್‌ಬರೇಲಿಗೆ ಹೊರಡಲಿದೆ ಎಂದು ಕಾಂಗ್ರೆಸ್​ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳಿವೆ. ಸದ್ಯಕ್ಕೆ ಎಸ್​ಪಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಐದು ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ 37 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ 67 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಪಕ್ಷಕ್ಕೆ ರಾಜೀನಾಮೆ ನೀಡಿದ 70 ವರ್ಷದ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಇದೇ ವೇಳೆ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಎಲ್ಲರೂ ಲಾಭ ಪಡೆಯಲು ಬರುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಮೇಥಿಯಲ್ಲಿ ಇಂದು ಭಾರತ್ ಜೋಡೋ ನ್ಯಾಯ ಯಾತ್ರೆ: ರಾಹುಲ್​ಗೆ ಅಖಿಲೇಶ್ ಯಾದವ್ ಸಾಥ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.