ನವದೆಹಲಿ: ಪ್ಯಾರಿಸ್ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ 2024ದಲ್ಲಿ ಭಾರತ 29 ಪದಕ ಗಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥ್ಲೀಟ್ಗಳನ್ನು ಶ್ಲಾಘಿಸಿದ್ದು, ಕ್ರೀಡಾಕೂಟದಲ್ಲಿ ಇದು ಭಾರತದ ಅತ್ಯುತ್ತಮ ಪ್ರದರ್ಶನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾಲಿಂಪಿಕ್ಸ್ ಪಟುಗಳ ಅಚಲವಾದ ಸಮರ್ಪಣೆ ಮತ್ತು ಅದಮ್ಯ ಮನೋಭಾವವನ್ನು ಹೊಗಳಿದ್ದಾರೆ. ಈ ಪ್ಯಾರಾಲಿಂಪಿಕ್ಸ್ ವಿಶೇಷ ಮತ್ತು ಐತಿಹಾಸಿಕ ಎಂದು ಕೊಂಡಾಡಿದ್ದಾರೆ.
ನಮ್ಮ ಅಸಾಧಾರಣ ಪ್ಯಾರಾಲಿಂಪಿಕ್ಸ್ ಅಥ್ಲೀಟ್ಗಳು 29 ಪದಕ ಗೆದ್ದಿದ್ದಾರೆ. ಈ ಸಾಧನೆಗೆ ದೇಶ ಹೆಮ್ಮೆ ಪಡುತ್ತಿದೆ. ಇದು ಭಾರತ ಪ್ಯಾರಾಲಿಂಪಿಕ್ಸ್ ಪ್ರವೇಶಿಸಿದಾಗಿನಿಂದ ಅತ್ಯುತ್ತಮ ಪ್ರದರ್ಶನ. ಈ ಸಾಧನೆಗೆ ನಮ್ಮ ಅಥ್ಲೀಟ್‌ಗಳ ಸಮರ್ಪಣಾ ಭಾವ ಮತ್ತು ಪರಿಶ್ರಮ ಕಾರಣ. ಅವರ ಕ್ರೀಡಾ ಮನೋಭಾವ ನಮಗೆ ಮತ್ತು ಭವಿಷ್ಯದ ಅಥ್ಲೀಟ್ಗಳಿಗೆ ಸ್ಪೂರ್ತಿ. ಇದು ನಮಗೆಲ್ಲ ಮರೆಯಲಾಗದ ಕ್ಷಣ ಎಂದು ತಿಳಿಸಿದ್ದಾರೆ.
Paralympics 2024 have been special and historical.
— Narendra Modi (@narendramodi) September 8, 2024
India is overjoyed that our incredible para-athletes have brought home 29 medals, which is the best ever performance since India's debut at the Games.
This achievement is due to the unwavering dedication and indomitable spirit… pic.twitter.com/tME7WkFgS3
11 ದಿನಗಳ ಕಾಲ ನಡೆದ ಪ್ಯಾರಾಲಿಂಪಿಕ್ಸ್ ಗೇಮ್ಸ್ಗೆ ಭಾನುವಾರ ಸಂಜೆ ವರ್ಣರಂಜಿತ ತೆರೆ ಬಿತ್ತು. ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಅಂದಾಜು 64,000ಕ್ಕೂ ಹೆಚ್ಚು ಪ್ರೇಕ್ಷಕರು ಮತ್ತು 8,500ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.
ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ತೋರಿದೆ.