ETV Bharat / bharat

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ ತನಿಖಾ ತಂಡ - TIRUPATI LADDU ROW

ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುವ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ಮಾಡಿದ ಆರೋಪ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

TIRUPATI LADDU ROW
ತಿರುಪತಿ ಲಡ್ಡು (ETV Bharat)
author img

By ETV Bharat Karnataka Team

Published : Feb 10, 2025, 7:49 AM IST

ತಿರುಪತಿ(ಆಂಧ್ರಪ್ರದೇಶ): ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ.

ಭೋಲೆ ಬಾಬಾ ಆರ್ಗ್ಯಾನಿಕ್ ಡೈರಿ ಪ್ರೈವೇಟ್ ಲಿಮಿಟೆಡ್‌ (ರೂರ್ಕಿ, ಉತ್ತರಾಖಂಡ) ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ಶ್ರೀವೈಷ್ಣವಿ ಡೈರಿ ಪ್ರೈವೇಟ್ ಲಿಮಿಟೆಡ್ (ಪೆನುಬಾಕ, ಶ್ರೀಕಾಳಹಸ್ತಿ) ಸಿಇಒ ಅಪೂರ್ವ ಚವ್ಡಾ ಹಾಗೂ ಮತ್ತು ಡಾ. ಎಆರ್ ಡೈರಿ (ದಿಂಡಿಗಲ್, ತಮಿಳುನಾಡು) ಎಂಡಿ ರಾಜು ರಾಜಶೇಖರನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ನಾಲ್ಕು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಎಂಬವರು ಭೋಲೆ ಬಾಬಾ ಡೈರಿಯವರು. ವೈಷ್ಣವಿ ಡೈರಿಯ ಅಪೂರ್ವ ಚವ್ಡಾ ಮತ್ತು ಎಆರ್ ಡೈರಿಯ (ರಾಜು) ರಾಜಶೇಖರನ್" ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆ: ಮೂಲಗಳ ಪ್ರಕಾರ, ತುಪ್ಪ ಪೂರೈಕೆಯ ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆಯು ಎಸ್​​ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಹೀಗಾಗಿ, ನಾಲ್ವರನ್ನು ಬಂಧಿಸಲಾಗಿದೆ. ವೈಷ್ಣವಿ ಡೈರಿ ಅಧಿಕಾರಿಗಳು ದೇವಸ್ಥಾನಕ್ಕೆ ತುಪ್ಪ ಪೂರೈಸಲು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ, ಟೆಂಡರ್ ಪ್ರಕ್ರಿಯೆಯನ್ನು ತಿರುಚಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಪಡೆಯಲಾಗಿದೆ ಎಂದು ಸುಳ್ಳು ಹೇಳಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ಅಗತ್ಯ ತುಪ್ಪದ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯವನ್ನು ಅದು ಹೊಂದಿಲ್ಲ ಎಂಬ ಅಂಶಗಳು ತನಿಖೆ ವೇಳೆ ಗೊತ್ತಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಸುಪ್ರೀಂಕೋರ್ಟ್​ ಆದೇಶದ ಮೇರೆಗೆ ರಚನೆಯಾದ ತಂಡ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ಆರೋಪದ ತನಿಖೆಗಾಗಿ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕಳೆದ ವರ್ಷ ನವೆಂಬರ್‌ನಲ್ಲಿ ಐವರು ಅಧಿಕಾರಿಗಳ ಸಿಬಿಐ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶದ ಇಬ್ಬರು ಪೊಲೀಸರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಓರ್ವ ಅಧಿಕಾರಿ ಇದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು 2024ರ ಸೆಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂದಿನ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತದ ಅವಧಿಯಲ್ಲಿ, ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಆ ಬಳಿಕ ಈ ವಿಚಾರವು ದೇಶಾದ್ಯಂತ ಭಾರಿ ಚರ್ಚೆ, ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ತಿರುಮಲ ಲಡ್ಡು ವಿಚಾರ: ದಿಂಡಿಗಲ್‌ನಲ್ಲಿ ಎಆರ್ ಡೈರಿ ಫುಡ್‌ಗಳ ವಿಚಾರಣೆಗೆ ಆಗಮಿಸಿದ ತಿರುಪತಿ ಪೊಲೀಸರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.