ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹೊರಟ ಭಕ್ತಸಮೂಹದಲ್ಲಿ ಮತ್ತೊಂದು ಕಾಲ್ತುಳಿತ ದುರಂತ ಸಂಭವಿಸಿದೆ. ನವದೆಹಲಿಯ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಉಂಟಾದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಪೈಕಿ ಬಹುತೇಕ, 14 ಮಂದಿ ಮಹಿಳೆಯರು ಎಂದು ವರದಿಯಾಗಿದೆ. ಮೃತರು ಬಿಹಾರ , ದೆಹಲಿ ಮತ್ತು ಹರಿಯಾಣದವರೆಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ದೆಹಲಿಯ ಕೇಂದ್ರ ರೈಲು ನಿಲ್ದಾಣದ 14, 15ನೇ ಪ್ಲಾರ್ಟ್ಫಾರ್ಮ್ನಲ್ಲಿ ಘಟನೆ ನಡೆದಿದೆ. ಸಾವಿರಾರು ಜನರು ಎರಡೂ ಪ್ಲಾರ್ಟ್ಫಾರ್ಮ್ಗಳಲ್ಲಿ ಕಿಕ್ಕಿರಿದು ತುಂಬಿದ್ದರು. ರೈಲು ಹತ್ತಲು ಪ್ರಯತ್ನಿಸುತ್ತಿರುವ ವೇಳೆ ಕಾಲ್ತುಳಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
VIDEO | Visuals from platform number 12 and 13 after a stampede-like situation broke out at the New Delhi Railway station, triggering a chaos on platform number 14 and 15.
— Press Trust of India (@PTI_News) February 15, 2025
(Full video available on PTI Videos - https://t.co/n147TvqRQz)#NewDelhi #NewDelhiRailwayStation pic.twitter.com/oxpSBcZt5v
2 ರೈಲುಗಳು ತಡವಾಗಿದ್ದೇ ಕಾರಣವೇ?: ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ರಾತ್ರಿ 9.55ರ ಸುಮಾರಿನಲ್ಲಿ ಪ್ರಯಾಗ್ರಾಜ್ಗೆ ಹೊರಡಬೇಕಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳ ಪ್ರಯಾಣ ನಿಗದಿತ ಸಮಯಕ್ಕಿಂತ ವಿಳಂಬ ಮಾಡಿದ್ದವು. ಇದರಿಂದ, ನಿಲ್ದಾಣವು ಸಾವಿರಾರು ಭಕ್ತರಿಂದ ತುಂಬಿ ತುಳುಕುತ್ತಿತ್ತು.
12, 13, 14ನೇ ಪ್ಲಾರ್ಟ್ಫಾರ್ಮ್ ಮೇಲೆ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ತುಂಬಿದ್ದರು. ಇನ್ನಷ್ಟು ಭಕ್ತರು ನಿಲ್ದಾಣದೊಳಗೆ ಬರುತ್ತಿರುವಾಗ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಸಾವು ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
VIDEO | Visuals from platform number 14. A stampede-like situation broke out at the New Delhi Railway station, triggering a chaos on platform number 14 and 15.
— Press Trust of India (@PTI_News) February 15, 2025
(Full video available on PTI Videos - https://t.co/n147TvqRQz)#NewDelhi #NewDelhiRailwaystation pic.twitter.com/eOx5JDfycy
ರೈಲ್ವೆ ಪೊಲೀಸ್ ಉಪ ಆಯುಕ್ತರ ತಿಳಿಸಿದಂತೆ, "ಪ್ರತಿ ಗಂಟೆಗೆ 1,500 ಸಾಮಾನ್ಯ ಪ್ರಯಾಣ ಟಿಕೆಟ್‌ಗಳು ಮಾರಾಟವಾಗುತ್ತಿತ್ತು. ಇದರಿಂದಾಗಿ ನಿಲ್ದಾಣ ಜನರಿಂದ ಭರ್ತಿಯಾಗಿತ್ತು. ಎರಡು ರೈಲುಗಳು ತಡವಾಗಿ ಬಂದಿದ್ದಕ್ಕೆ ಮೂರು ಪ್ಲಾರ್ಟ್ಫಾರ್ಮ್ಗಳು ಜನರಿಂದ ತುಂಬಿದ್ದವು. 14 ಮತ್ತು 16ನೇ ಪ್ಲಾರ್ಟ್ಫಾರ್ಮ್ನ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ" ಎಂದರು.
ಕುಟುಂಬಸ್ಥರ ರೋದನ: ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರು ರೋದಿಸುತ್ತಿರುವುದು ರೈಲು ನಿಲ್ದಾಣದಲ್ಲಿ ಮನಕಲುಕುತ್ತಿತ್ತು. ಎಷ್ಟೋ ಜನರು ಟಿಕೆಟ್ ಕಾಯ್ದಿರಿಸಿದ್ದರೂ, ಭಾರೀ ಜನಸಂದಣಿಯಿಂದಾಗಿ ರೈಲು ಹತ್ತಲೂ ಸಾಧ್ಯವಾಗಲಿಲ್ಲ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ರೈಲ್ವೆ ಅಧಿಕಾರಿಗಳು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿ, ಜನರನ್ನು ನಿಯಂತ್ರಿಸಿದ್ದಾರೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ದೆಹಲಿ ಅಗ್ನಿಶಾಮಕ ದಳ ಮುಖ್ಯಸ್ಥರು ತಿಳಿಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ, ಹೆಚ್ಚುವರಿ ರೈಲುಗಳ ವ್ಯವಸ್ಥೆ: ರೈಲು ನಿಲ್ದಾಣದಲ್ಲಿ ಸಂಭವಿಸಿದ ದುರಂತಕ್ಕೆ ಸಂಭವಿಸಿದಂತೆ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಇಲಾಖೆ ಸೂಚಿಸಿದೆ. ಜೊತೆಗೆ, 4 ಹೆಚ್ಚುವರಿ ರೈಲುಗಳನ್ನು ಪ್ರಯಾಗ್ರಾಜ್ಗೆ ಬಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.
— Narendra Modi (@narendramodi) February 15, 2025
ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸಂತಾಪ: ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ದೆಹಲಿ ಲೆಫ್ಟಿನೆಂಟ್ ಜನರಲ್ ವಿ.ಕೆ. ಸಕ್ಸೇನಾ, ಹಂಗಾಮಿ ಸಿಎಂ ಅತಿಶಿ ಸಂತಾಪ ಸೂಚಿಸಿದ್ದಾರೆ. "ಘಟನೆಯು ತೀವ್ರ ದುಃಖ ತರಿಸಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಜೊತೆ ನಾವಿರುತ್ತೇವೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ" ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ: ಕಾಲ್ತುಳಿತದಲ್ಲಿ ಮೃತಪಟ್ಟ ಜನರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಹಾಗು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರವನ್ನು ಭಾರತೀಯ ರೈಲ್ವೇ ಘೋಷಿಸಿದೆ.
ಇದನ್ನೂ ಓದಿ: 41 ಘಾಟ್ಗಳಿದ್ದರೂ ಸಂಗಮ್ ಘಾಟ್ಗೆ ಭಕ್ತರು ನುಗ್ಗಿದ್ದು ಕಾಲ್ತುಳಿತಕ್ಕೆ ಪ್ರಮುಖ ಕಾರಣವಾಯ್ತೆ!?
ಕಾಲ್ತುಳಿತದ ನಂತರ ಮಹಾಕುಂಭದಲ್ಲಿ ಜನದಟ್ಟಣೆ ನಿರ್ವಹಣೆಗೆ ಹಲವು ಬದಲಾವಣೆ; ವಿವಿಐಪಿ ಪಾಸ್ ರದ್ದು