ಪ್ರಯಾಗ್‌ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಹಾಗೂ 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಡಿಐಜಿ ವೈಭವ್ ಕೃಷ್ಣ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
90 ಜನರನ್ನು ಆಸ್ಪತ್ರೆಗೆ ಕರೆತರಲಾಗಿದೆ. 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮೃತರನ್ನು ಗುರುತಿಸಲಾಗಿದೆ. ಭಾರೀ ಜನಸಂದಣಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.
#WATCH | On Mahakumbh stampede, Uttar Pradesh CM Yogi Adityanath says " the govt has decided that a judicial inquiry of the incident will be done. for this, we have formed a 3-member judicial commission headed by justice harsh kumar, former dg vk gupta and retired ias dk singh. we… pic.twitter.com/GlfGoOjBF3
— ANI (@ANI) January 29, 2025
ತಲಾ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ ಆದಿತ್ಯನಾಥ: ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಯೋಗಿ ಆದಿತ್ಯನಾಥ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂತಹ ದುರಂತ ಹೇಗೆ ಸಂಭವಿಸಿತು ಎಂಬುದರ ಕುರಿತು ತಳಮಟ್ಟಕ್ಕೆ ಹೋಗಿ ಗಂಭೀರವಾದ ತನಿಖೆ ನಡೆಸಬೇಕಿದೆ ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30 ರಂದು ಮಹಾಕುಂಭಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ಇದೇ ವೇಳೆ ಘೋಷಿಸಿದ್ದಾರೆ. ಘಟನೆಯಲ್ಲಿ 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 30 ಜನರು ಮೃತಪಟ್ಟಿದ್ದಾರೆ. 36 ಮಂದಿ ಪ್ರಯಾಗ್‌ರಾಜ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
महाकुम्भ-2025, प्रयागराज में हुई घटना अत्यंत दु:खद है, मर्माहत करने वाली है।
— Yogi Adityanath (@myogiadityanath) January 29, 2025
मृतकों को विनम्र श्रद्धांजलि व मेरी संवेदनाएं शोक संतप्त परिजनों के साथ हैं... pic.twitter.com/IuJ8Sz2GTh
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ: ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ, ಇದಕ್ಕಾಗಿ ನಾವು ನ್ಯಾಯಮೂರ್ತಿ ಹರ್ಷ್ ಕುಮಾರ್, ಮಾಜಿ ಡಿಜಿ ವಿಕೆ ಗುಪ್ತಾ ಮತ್ತು ನಿವೃತ್ತ ಐಎಎಸ್ ಡಿಕೆ ಸಿಂಗ್ ನೇತೃತ್ವದ 3 ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದ್ದೇವೆ. ಇನ್ನು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ನಿಯಂತ್ರಣ ಕೊಠಡಿಯಿಂದ ಇಡೀ ಘಟನೆಯ ಮೇಲೆ ನಿಗಾ ಇರಿಸಿದ್ದೇವೆ. ದಿನವಿಡೀ ಸಭೆಗಳು ನಡೆಸಲಾಗಿದ್ದು, ಘಟನೆಗಳಿಗೆ ಸಂಬಂಧಿಸಿದಂತೆ ಆಡಳಿತದೊಂದಿಗೆ ನಿರಂತರವಾಗಿ ಸಂವಹನ ನಡೆಸಲಾಗಿದೆ’’ ಎಂದು ಸಿಎಂ ಹೇಳಿದ್ದಾರೆ.
#WATCH | #MahaKumbh2025 | Prayagraj, Uttar Pradesh: Drone visuals from the Ghats of Triveni as a huge number of devotees reach for the Amrit Snan on the occasion of Mauni Amavasya.
— ANI (@ANI) January 29, 2025
Source: Mela Administration pic.twitter.com/FoQrbprWGK
ಕಾಲ್ತುಳಿತದ ವೇಳೆ ನೂಕುನುಗ್ಗಲು ಉಂಟಾದಾಗ ಸ್ನಾನಕ್ಕೆ ಸೇರಿದ್ದ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶೂ, ಚಪ್ಪಲಿ, ಬಟ್ಟೆಗಳು ಘಟನೆಯ ಗಂಭೀರತೆಯನ್ನು ಸೂಚಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಅಖಾರಾಗಳು ಇದೀಗ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ.
ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು: ಕಾಲ್ತುಳಿತದ ವೇಳೆ ಕರ್ನಾಟಕದ ಬೆಳಗಾವಿಯಿಂದ ತೆರಳಿದ್ದವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಇದರಲ್ಲಿ ಇನ್ನೂ ಕೆಲವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
#WATCH | Prayagraj | Massive crowd of devotees continue to gather in Mahakumbh area to take holy dip in Triveni waters on Mauni Amavasya
— ANI (@ANI) January 29, 2025
1.75 crore people have taken holy dip today till 6 am; a total of 19.94 crore people have taken holy dip till 28th January, as per UP govt. pic.twitter.com/AsNs81fUa9
'ಈಟಿವಿ ಭಾರತ'ದ ಪ್ರತಿನಿಧಿಯೊಂದಿಗೆ ಮಾತನಾಡಿದ ಬೆಳಗಾವಿಯ ಮಹಿಳೆ ಸರೋಜಿನಿ ಅವರು, "ನಾವು ಎರಡು ಬಸ್ಗಳಲ್ಲಿ 60 ಜನ ಮಹಾಕುಂಭ ಮೇಳಕ್ಕೆ ಬಂದಿದ್ದೇವೆ. ಇದ್ದಕ್ಕಿದ್ದಂತೆ ಕಾಲ್ತುಳಿತ ಉಂಟಾಯಿತು. ನಮ್ಮ ಜೊತೆ ಬಂದರಲ್ಲಿ ನಾಲ್ಕೈದು ಜನ ಕಾಣುತ್ತಿಲ್ಲ. ನಮ್ಮದು ಒಂಭತ್ತು ಜನರ ಗುಂಪು ಇತ್ತು. ಇದರಲ್ಲಿ ಮೂರ್ನಾಲ್ಕು ಜನರು ಇಲ್ಲೇ ಇದ್ದಾರೆ. ಉಳಿದವರು ಕಾಣುತ್ತಿಲ್ಲ" ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಯಾಗ್‌ರಾಜ್‌ನಲ್ಲಿ ಈಗಾಗಲೇ ಮಕರ ಸಂಕ್ರಾಂತಿ, ಪೌರ್ಣಿಮೆ ಸೇರಿದಂತೆ ಮಹತ್ವದ ದಿನಗಳಂದು ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಇಂದು ಮೌನಿ ಅಮಾವಾಸ್ಯೆಯಾಗಿದ್ದು ಮತ್ತೊಂದು ಪವಿತ್ರ ಸ್ನಾನಕ್ಕೆ ಪ್ರಮುಖವಾದ ದಿನ. ಈ ದಿನ 10 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ನಡೆಸುವ ಸಾಧ್ಯತೆ ಇದೆ ಎಂದು ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿತ್ತು. ಈ ನಿಟ್ಟಿನಲ್ಲಿ ಹೆಚ್ವಿನ ಭದ್ರತಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿತ್ತು.
ಮುನ್ನೆಚ್ಚರಿಕೆಯಾಗಿ ಗಡಿಭಾಗದಲ್ಲಿ ವಾಹನಗಳಿಗೆ ತಡೆ: ತಡರಾತ್ರಿ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಪ್ರಯಾಗರಾಜ್ ಪಕ್ಕದ 8 ಜಿಲ್ಲೆಗಳ ಗಡಿಗಳಲ್ಲಿ ವಾಹನಗಳನ್ನು ನಿಲ್ಲಿಸಲಾಗಿದೆ. ಕುಂಭಮೇಳದ ಆಡಳಿತದಿಂದ ಅನುಮತಿ ಸಿಗುವವರೆಗೆ ವಾಹನಗಳು ಮುಂದೆ ಸಾಗುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಡಿಯಲ್ಲಿ ವಾಹನಗಳನ್ನು ರಸ್ತೆಯ ಮೇಲೆಯೇ ನಿಲ್ಲಿಸಲಾಗುತ್ತದೆ ಅಥವಾ ಪಾರ್ಕಿಂಗ್ ಸ್ಥಳದಲ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಮಹಾಕುಂಭದಲ್ಲಿ ಜನಸಂದಣಿ ಕಡಿಮೆಯಾಗುತ್ತಿದ್ದಂತೆ ಅಥವಾ ಎಲ್ಲವೂ ಸರಾಗವಾದ ಬಳಿಕ ಈ ವಾಹನಗಳಿಗೆ ತೆರಳಲು ಅನುಮತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ಗಡಿಗಳಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ತಡೆಯಲಾಗಿದೆ.
ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ : ಕಿನ್ನರ್ ಅಖಾಡ ಶಿಬಿರಕ್ಕೆ ಹೊತ್ತಿಕೊಂಡ ಅಗ್ನಿ