ETV Bharat / bharat

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರು ಶಿಕ್ಷಕರ ಬಂಧನ - GANG RAPE

ವಿದ್ಯಾರ್ಥಿನಿಯೊಬ್ಬಳ ಮೇಲೆ ಅದೇ ಶಾಲೆಯ ಮೂವರು ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

suspension of three teachers for Krishnagiri school girl gang raped issue
ಸಾಂದರ್ಭಿಕ ಚಿತ್ರ (File)
author img

By ETV Bharat Karnataka Team

Published : Feb 6, 2025, 6:28 PM IST

ಕೃಷ್ಣಗಿರಿ (ತಮಿಳುನಾಡು) : 13 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿಸಿದ ಆರೋಪದಡಿ ಮೂವರು ಶಿಕ್ಷಕರನ್ನು ಬಂಧಿಸಿ, ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಯ ತಾಯಿ ನೀಡಿದ ದೂರಿನನ್ವಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿರುವುದಾಗಿ ಕೃಷ್ಣಗಿರಿ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬರುತ್ತಿದ್ದಂತೆ ಕೃಷ್ಣಗಿರಿಯ ಪ್ರಧಾನ ಶಿಕ್ಷಣ ಅಧಿಕಾರಿ (ಪ್ರಭಾರ) ಮುನಿರಾಜ್ ಮೂವರು ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.

ವಿದ್ಯಾರ್ಥಿನಿಯು ಒಂದು ತಿಂಗಳು ಶಾಲೆಗೆ ಬರದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ವಿಧ್ಯಾರ್ಥಿನಿಯ ಮನೆಗೆ ತೆರಳಿ ವಿಚಾರಿಸಿದಾಗ ಆಕೆ ಗರ್ಭಿಣಿ ಎಂಬ ವಿಷಯ ಗೊತ್ತಾಗಿದೆ. ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಶಿಕ್ಷಕರು ತನ್ನ ಮಗಳು ಗರ್ಭಿಣಿ ಆಗಲು ಕಾರಣವೆಂದು ಬಾಲಕಿಯ ತಾಯಿ ಆರೋಪಿಸಿದ್ದರು. ವಿಷಯ ತಿಳಿದು ಮುಖ್ಯೋಪಾಧ್ಯಾಯರು ಆಘಾತಕ್ಕೊಳಗಾಗಿದ್ದರು.

ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ದೂರು ನೀಡುವಂತೆ ಮುಖ್ಯೋಪಾಧ್ಯಾಯರು ಸೂಚಿಸಿದ್ದು, ಅದರಂತೆ ಬಾಲಕಿಯ ತಾಯಿ ತನ್ನ ಮಗಳ ಮೇಲೆ ಮೂವರು ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪಿಸಿ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಅಧಿಕಾರಿಗಳು ಬಾಲಕಿಯನ್ನು ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಘಟನೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ದೂರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಾಗ ಬಾಲಕಿಯು ತನ್ನ ಮೇಲೆ 57, 48 ಮತ್ತು 37 ವರ್ಷ ವಯಸ್ಸಿನ ಮೂವರು ಶಿಕ್ಷಕರು ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಳು. ಈ ಸಂಬಂಧ, ಬಾರ್ಕೂರು ಡಿಎಸ್ಪಿ ನೇತೃತ್ವದ ಎಲ್ಲಾ ಮಹಿಳಾ ಪೊಲೀಸರು ಮೂವರು ಶಿಕ್ಷಕರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 'ನೆಕ್ರೋಫಿಲಿಯಾ'ವನ್ನು ಅತ್ಯಾಚಾರದಡಿ ಪರಿಗಣಿಸಲು ಸಾಧ್ಯವಿಲ್ಲ: ಕರ್ನಾಟಕದ ಮೇಲ್ಮನವಿ ನಿರಾಕರಿಸಿದ ಸುಪ್ರೀಂ - NECROPHILIA UNDER RAPE PROVISION

ETV Bharat Logo

Copyright © 2025 Ushodaya Enterprises Pvt. Ltd., All Rights Reserved.