ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಸಿಬ್ಬಂದಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ದೂರಿದ್ದಾರೆ.
ಈ ಪ್ರಕರಣದ ಕುರಿತು ಮಾತನಾಡಿರುವ ಪೊಲೀಸರು, ಈ ಬಗ್ಗೆ ಯಾವುದೇ ಔಪಚಾರಿಕ ದೂರು ಪಡೆದಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಕಚೇರಿ ಸಿಬ್ಬಂದಿ ದೌರ್ಜನ್ಯ ನಡೆಸಿರುವುದಾಗಿ ಸ್ವಾತಿ ಮಾಲಿವಾಲ್ ಎರಡು ಬಾರಿ ತುರ್ತು ಕರೆಗಳನ್ನು ಮಾಡಿದ್ದರು. ಈ ಎರಡು ಕರೆಗಳು ಬೆಳಗ್ಗೆ 10 ಗಂಟೆಗೆ ದಾಖಲಾಗಿವೆ. ಇದಾದ ಬಳಿಕ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತಂಡ ಮುಖ್ಯಮಂತ್ರಿ ಕಚೇರಿ ತಲುಪಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.
ಸ್ವಾತಿ ಮಾಲಿವಾಲ್ ಆರೋಪದ ಕುರಿತು ತಕ್ಷಣಕ್ಕೆ ಸಿಎಂ ಕಚೇರಿಯಾಗಲಿ ಅಥವಾ ದೆಹಲಿ ಆಡಳಿತ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ಓದಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ಆಪ್