ETV Bharat / bharat

ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 5,845 ಶಿಕ್ಷಕರು ಸರ್ಕಾರಿ ಶಾಲೆಗೆ ವರ್ಗಾವಣೆ! - aided school Teachers transfer

ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 5,845 ಶಿಕ್ಷಕರನ್ನು ತುರ್ತಾಗಿ ಮೂರು ವರ್ಷಗಳ ಕಾಲ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಮಾಡಿ ಆದೇಶ ಮಾಡಿದೆ.

ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ
ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ (ETV Bharat)
author img

By ETV Bharat Karnataka Team

Published : Jun 20, 2024, 6:51 AM IST

ಚೆನ್ನೈ, ತಮಿಳುನಾಡು: ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 5,845 ಶಿಕ್ಷಕರನ್ನು ಮೂರು ವರ್ಷಗಳ ಕಾಲ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಮಾಡಿ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ತುರ್ತು ಆದೇಶ ಹೊರಡಿಸಿದೆ. ಅಲ್ಲದೇ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾದಾಗ ಸರ್ಕಾರಿ ಶಾಲೆಗೆ ನೇಮಕಗೊಂಡಿರುವ ಶಿಕ್ಷರನ್ನು ಮತ್ತೆ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮರಳಲು ಅವಕಾಶ ಕಲ್ಪಿಸಿ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ತಮಿಳುನಾಡಿನ ಸರ್ಕಾರಿ ಪ್ರಾಥಮಿಕ, ಮಧ್ಯಮ ಮತ್ತು ಪ್ರೌಢಶಾಲೆಗಳಲ್ಲಿ ಸುಮಾರು 14,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 800ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಆಯ್ಕೆ ಮಂಡಳಿಯ ಮೂಲಕ 10,700 ಪ್ರೌಢ ಶಿಕ್ಷಕರನ್ನು ನೇಮಿಸಲಾಗುತ್ತದೆ.

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮಾರ್ಚ್ 1ರಿಂದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ನಡೆಸಲಾಗಿದ್ದು, ಪ್ರಸ್ತುತ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 3 ಲಕ್ಷ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಕರಿಲ್ಲದೇ ಹುದ್ದೆಗಳು ಖಾಲಿ ಆಗಿವೆ. ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಈಗಾಗಲೇ ನೇಮಕಗೊಂಡ ಶಿಕ್ಷಕರು ದಾಖಲಾತಿ ಇಲ್ಲದೆ ಹೆಚ್ಚುವರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕುಮಾರಗುರುಪರನ್ ಮಾತನಾಡಿ, "ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯದಡಿ 5,018 ಪ್ರಾಥಮಿಕ ಶಾಲೆಗಳು ಹಾಗೂ 1,496 ಮಧ್ಯಮ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳಲ್ಲಿ ಆಗಸ್ಟ್ 1ರ ವರೆಗಿನ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ಬಳಿಕ ಶಿಕ್ಷಕರ ನೇಮಕದ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿಗಳು (ಪ್ರಾಥಮಿಕ ಶಿಕ್ಷಣ) ನಿರ್ಧಾರ ಮಾಡಲಿದ್ದಾರೆ. ಅದರ ಆಧಾರದ ಮೇಲೆ ಸರ್ಕಾರವು ಪ್ರತಿ ವರ್ಷ ಶಾಲೆಗಳಿಗೆ ಬೋಧನೆ ಮತ್ತು ನಿರ್ವಹಣೆಗೆ ಅನುದಾನವನ್ನು ಮಂಜೂರು ಮಾಡಲಿದೆ.

2023-2024ನೇ ಸಾಲಿಗೆ ವಿದ್ಯಾರ್ಥಿಗಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಹುದ್ದೆಗಳನ್ನು ನಿಗದಿಪಡಿಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿಗಳನ್ನು ಸ್ವೀಕರಿಸಲಾಗಿದೆ. ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಮಧ್ಯಮ ಶಾಲೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಮಿಳುನಾಡು 5,018 ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 3,809 ಮಾಧ್ಯಮಿಕ ಬೋಧಕ ಹುದ್ದೆಗಳು ಖಾಲಿ ಇದ್ದು ಮತ್ತು 775 ಹೆಚ್ಚುವರಿ ಹುದ್ದೆಗಳು ಖಾಲಿ ಇವೆ.

ಅದೇ ರೀತಿ, 1,496 ಸರ್ಕಾರಿ ಅನುದಾನಿತ ಮಧ್ಯಮ ಶಾಲೆಗಳಲ್ಲಿ 1,737 ಪ್ರೌಢ ಶಿಕ್ಷಕರ ಹೆಚ್ಚುವರಿ ಹುದ್ದೆಗಳು ಮತ್ತು 364 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಮಧ್ಯಮ ಶಾಲೆಗಳಲ್ಲಿ 299 ಪದವೀಧರ ಬೋಧಕ ಹುದ್ದೆಗಳು ಮತ್ತು 201 ಸ್ನಾತಕೋತ್ತರ ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯದ ಅಧೀನದಲ್ಲಿರುವ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಮಧ್ಯಮ ಶಾಲೆಗಳಲ್ಲಿ 5,546 ಪ್ರೌಢ ಶಿಕ್ಷಕರ ಹುದ್ದೆಗಳು ಹಾಗೂ 299 ಪದವೀಧರ ಶಿಕ್ಷಕರ ಹುದ್ದೆಗಳು ಸೇರಿ ಒಟ್ಟು 5,845 ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಮಧ್ಯಮ ಶಾಲೆಗಳಲ್ಲಿ 2023-2024ನೇ ಸಾಲಿನ ಸಿಬ್ಬಂದಿ ವೇಳಾಪಟ್ಟಿಯಂತೆ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮಿಕ ಮತ್ತು ಪದವೀಧರ ಶಿಕ್ಷಕರಿಗೆ ನಿಯೋಜನೆ ನೀಡಲು ಸರ್ಕಾರ ನಿರ್ದೇಶಿಸಿದೆ.

ಇದನ್ನೂ ಓದಿ: 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ - Transfer Through Counselling

ETV Bharat Logo

Copyright © 2024 Ushodaya Enterprises Pvt. Ltd., All Rights Reserved.