ETV Bharat / bharat

ನಾಳೆ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ - Chandrababu Naidu - CHANDRABABU NAIDU

ಆಂಧ್ರಪ್ರದೇಶದಲ್ಲಿ ಎನ್​ಡಿಎ ನಾಯಕರಾಗಿ ಚಂದ್ರಬಾಬು ನಾಯ್ಡು ಆಯ್ಕೆಯಾಗಿದ್ದು, ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆಂಧ್ರ ಎನ್​ಡಿಎ ಕೂಟದ ನಾಯಕರಾಗಿ ಚಂದ್ರಬಾಬು ಆಯ್ಕೆ
ಚಂದ್ರಬಾಬು ನಾಯ್ಡು (ETV Bharat)
author img

By PTI

Published : Jun 11, 2024, 3:38 PM IST

ಅಮರಾವತಿ(ಆಂಧ್ರಪ್ರದೇಶ): ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಎನ್​​ಡಿಎ (ಟಿಡಿಪಿ, ಜನಸೇನಾ ಮತ್ತು ಬಿಜೆಪಿ) ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಡದಲ್ಲಿ ಇಂದು ನಡೆದ ಮೂರು ಪಕ್ಷಗಳ ಶಾಸಕರ ಸಭೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಚಂದ್ರಬಾಬು ನಾಯ್ಡು ಅವರನ್ನು ಎನ್​ಡಿಎ ನಾಯಕರನ್ನಾಗಿ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿ ಸೇರಿದಂತೆ ಎಲ್ಲ ಶಾಸಕರು ಒಪ್ಪಿಗೆ ನೀಡಿದರು. ಇದರೊಂದಿಗೆ ನಾಯ್ಡು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದಕ್ಕೂ ಮುನ್ನ ನಡೆದ ಟಿಡಿಪಿ ಶಾಸಕಾಂಗ ಸಭೆಯಲ್ಲಿ ನಾಯ್ಡು ಅವರು ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು. ಅದೇ ರೀತಿ, ರಾಜ್ಯದಲ್ಲಿ ಸ್ಪರ್ಧಿಸಿದ 21 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿ ಚರಿತ್ರೆ ಬರೆದಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಪಕ್ಷದ ವಿಧಾನಸಭೆ ನಾಯಕರಾಗಿ ಆಯ್ಕೆಯಾದರು.

ನಾಯ್ಡು ಪದಗ್ರಹಣಕ್ಕೆ ಮೋದಿ: ಎನ್​ಡಿಎ ನಾಯಕರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಚಂದ್ರಬಾಬು ನಾಯ್ಡು, "ನಿಮ್ಮೆಲ್ಲರ ಸಹಕಾರದೊಂದಿಗೆ ನಾಳೆ (ಜೂನ್​ 12) ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ. ಕೂಟದ ನಾಯಕನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ" ಎಂದು ಹೇಳಿದರು.

'ಆಂಧ್ರದ ಅಭಿವೃದ್ಧಿಗೆ ಕೇಂದ್ರದ ನೆರವು ಅಗತ್ಯ': ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದು, ಆಂಧ್ರಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ನೆರವಿನ ಅಗತ್ಯವಿದೆ. ರಾಜ್ಯದ ಪ್ರಗತಿಗಾಗಿ ಪ್ರಧಾನಿ ಮೋದಿ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಅಮರಾವತಿ ರಾಜಧಾನಿ: ಆಂಧ್ರಪ್ರದೇಶಕ್ಕೆ ಅಮರಾವತಿ ಮಾತ್ರ ಏಕೈಕ ರಾಜಧಾನಿಯಾಗಲಿದೆ ಎಂದು ಇದೇ ವೇಳೆ ಘೋಷಿಸಿದರು. ಇದೇ ಸಂದರ್ಭದಲ್ಲಿ ಮಹತ್ವಾಕಾಂಕ್ಷಿ ಪೋಲಾವರಂ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಈ ಹಿಂದಿನ ಸರ್ಕಾರದ ಮೂರು ರಾಜಧಾನಿ ಪ್ರಸ್ತಾಪವನ್ನು ತಿರಸ್ಕರಿಸಿದ ನಾಯ್ಡು, ಅಮರಾವತಿಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿ ಮಾಡಲಾಗುವುದು. ಬಂದರು ನಗರವಾದ ವಿಶಾಖಪಟ್ಟಣವನ್ನು ಆರ್ಥಿಕ ನಗರವಾಗಿ ಪ್ರಗತಿಯತ್ತ ಕೊಂಡೊಯ್ಯಲಾಗುವುದು ಎಂದರು.

ಹಿಂದಿನ ಸರ್ಕಾರದ ಕಪಿಮುಷ್ಟಿಯಿಂದ ರಾಜ್ಯವನ್ನು ಬಿಡಿಸಿದ್ದಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ ಅವರು, ರಾಜ್ಯವನ್ನು ಉಳಿಸುವ ಜನರು ಸಂಕಲ್ಪ ತೊಟ್ಟು ಎನ್​ಡಿಎ ಗೆಲ್ಲಿಸಿದ್ದಾರೆ. ಜನರು ಗೆಲ್ಲಬೇಕು ಮತ್ತು ರಾಜ್ಯ ಉಳಿಯಬೇಕು ಎಂದು ಹೇಳಿದರು.

ಆಂಧ್ರ ಚುನಾವಣಾ ಫಲಿತಾಂಶ(ವಿಧಾನಸಭೆ ಮತ್ತು ಲೋಕಸಭೆ): ಇತ್ತೀಚೆಗೆ ಮುಗಿದ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಒಳಗೊಂಡ ಎನ್‌ಡಿಎ ಕೂಟ 164 ವಿಧಾನಸಭೆ ಮತ್ತು 21 ಲೋಕಸಭಾ ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಜಗನ್​ ಮೋಹನ್​​ ರೆಡ್ಡಿ ನೇತೃತ್ವದ ವೈಎಸ್​ಆರ್​ಸಿಪಿ ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಂಡಿದೆ.

ಇದನ್ನೂ ಓದಿ: ಜೂನ್​ 12 ರಂದು ಚಂದ್ರಬಾಬು ನಾಯ್ಡು ಪ್ರಮಾಣವಚನ :ಆಂಧ್ರ ಕ್ಯಾಬಿನೆಟ್‌ನಲ್ಲಿ ಜನಸೇನೆಯಿಂದ ಯಾರಾಗಲಿದ್ದಾರೆ ಸಚಿವರು? - Who will take oath as ministers from Jana Sena

ETV Bharat Logo

Copyright © 2024 Ushodaya Enterprises Pvt. Ltd., All Rights Reserved.