ಲಖನೌ(ಉತ್ತರ ಪ್ರದೇಶ): 17 ವರ್ಷದ ಅಪ್ರಾಪ್ತ 5 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಜಾರ್ ಖಾಲಾ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಬಾಲಕ ಚಿಪ್ಸ್ ಪ್ಯಾಕೆಟ್ ಕೊಡಿಸುವ ನೆಪದಲ್ಲಿ ಬಾಲಕಿ ಕರೆದುಕೊಂಡು ಹೋಗಿದ್ದಾನೆ. ಬಹಳ ಸಮಯವಾದರೂ ಮಗಳು ಮನೆಗೆ ಬಾರದೇ ಇದ್ದುದನ್ನು ಕಂಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಪಕ್ಕದ ಮನೆಯಿಂದ ಬಾಲಕಿ ಅಳುವುದು ಕೇಳಿ ಮನೆಯವರು ಬಾಗಿಲು ಒಡೆದು ಒಳ ನುಗ್ಗಿದ್ದಾರೆ. ಸ್ಥಳೀಯರು ಆರೋಪಿ ಬಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, "ಬಾಲಕಿ ತನ್ನ ಪೋಷಕರೊಂದಿಗೆ ಬಜಾರ್ ಖಲಾ ಪ್ರದೇಶದ ಪ್ರದೇಶದಲ್ಲಿ ವಾಸಿಸುತ್ತಿದ್ದಾಳೆ. ಭಾನುವಾರ ಮನೆಯ ಹೊರಗೆ ಆಟವಾಡುತ್ತಿದ್ದಾಗ, ಪಕ್ಕದ ಮನೆಯಲ್ಲಿದ್ದ ಆರೋಪಿ ಆಕೆಯ ಬಳಿಗೆ ಬಂದಿದ್ದ. ಬಾಲಕಿಗೆ ಚಿಪ್ಸ್ ಪ್ಯಾಕೆಟ್ ಆಸೆ ತೋರಿಸಿ ಬಾಲಕಿಯನ್ನು ಸಮೀಪದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮಗಳು ಕಾಣದೇ ಇದ್ದ ಪೋಷಕರು ಹುಡುಕಾಟ ನಡೆಸಿದಾಗ ಪಕ್ಕದ ಮನೆಯಿಂದ ಅಳುವುದು ಕೇಳಿ ಬಾಗಿಲು ತೆಗೆಯಲು ಹೋದಾಗ ಲಾಕ್ ಆಗಿತ್ತು. ಕರೆದಾಗ ಯಾರೂ ಬಾಗಿಲು ತೆರೆಯದೇ ಇದ್ದಾಗ ಬಾಗಿಲು ಒಡೆಯಲಾಗಿದೆ. ಒಳಗೆ ಹೋಗಿ ನೋಡಿದಾಗ ಬಾಲಕಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ಜತೆಗೆ ಆರೋಪಿ ಕೂಡ ಕೋಣೆಯಲ್ಲಿದ್ದು ತಕ್ಷಣವೇ ಆತನನ್ನು ಸೆರೆ ಹಿಡಿದಿದ್ದಾರೆ.
ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ, ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ" ಎಂದು ಇನ್ಸ್‌ಪೆಕ್ಟರ್ ಬಜಾರ್ ಖಲಾ ಸಂತೋಷ್ ಆರ್ಯ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಾಲಾಪರಾಧಿ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಯೂಟ್ಯೂಬರ್ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ!