ETV Bharat / bharat

ಖಾಸಗಿ ಬಸ್-ಪಿಕಪ್ ನಡುವೆ ಭೀಕರ ಅಪಘಾತ: 10 ಮಂದಿ ದುರ್ಮರಣ - Horrific Accident - HORRIFIC ACCIDENT

ಖಾಸಗಿ ಬಸ್ ಮತ್ತು ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಅಸುನೀಗಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ.

accident
ಅಪಘಾತಕ್ಕೀಡಾದ ಪಿಕಪ್​ (ETV Bharat)
author img

By ETV Bharat Karnataka Team

Published : Aug 18, 2024, 2:24 PM IST

ಬುಲಂದ್‌ಶಹರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬುಲಂದ್‌ಶಹರ್​ನ ಸೇಲಂಪುರ ಎಂಬಲ್ಲಿ ಭಾನುವಾರ ಖಾಸಗಿ ಬಸ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪಿಕಪ್‌ನಲ್ಲಿ ಸುಮಾರು 25 ಜನರಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡವರ ಕಿರುಚಾಟ ಕೇಳಿ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪಿಕಪ್ ವಾಹನವು ಗಾಜಿಯಾಬಾದ್‌ ಕಡೆಯಿಂದ ಬರುತ್ತಿರುವಾಗ ಅವಘಡ ಸಂಭವಿಸಿದೆ. ಖಾಸಗಿ ಬಸ್ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಪಿಕಪ್​ಗೆ ಡಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಮಾರ್ಗ ಬದಲಿಸಲು ಸಿಗ್ನಲ್​ ಹಾಕಿದ್ದರೂ ಕೂಡ ಗಮನಿಸದ ಚಾಲಕ ಬಸ್​​ ಡಿಕ್ಕಿ ಹೊಡೆಸಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿ ಸಿಪಿ ಸಿಂಗ್ ಮತ್ತು ಎಸ್‌ಎಸ್‌ಪಿ ಶ್ಲೋಕ್ ಕುಮಾರ್ ಕೂಡ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದಿದ್ದಾರೆ. ಅಪಘಾತದಿಂದ ಆಕ್ರೋಶಗೊಂಡ ಸ್ಥಳೀಯರು ಕೆಲಕಾಲ ರಸ್ತೆ ತಡೆ ನಡೆಸಿದರು.

ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಂಭೀರ ಗಾಯಗೊಂಡ ನಾಲ್ಕು ಮಂದಿಯನ್ನು ಮೀರತ್ ವೈದ್ಯಕೀಯ ಕಾಲೇಜಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇನ್ನೂ ಕೆಲವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಪ್ರತಿಕ್ರಿಯಿಸಿದ್ದು, ಗಾಯಾಳುಗಳಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

ಇದನ್ನೂ ಓದಿ: ಅಮೃತಸರ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಕೋಟ್ಯಂತರ ರೂಪಾಯಿ ಬೇಡಿಕೆ - Bomb threat to Amritsar airport

ETV Bharat Logo

Copyright © 2025 Ushodaya Enterprises Pvt. Ltd., All Rights Reserved.