ಮಸ್ಸೂರಿ (ಉತ್ತರಾಖಂಡ): ಮಸ್ಸೂರಿ- ಡೆಹ್ರಾಡೂನ್ ರಸ್ತೆಯ ಜರಿಪಾನಿ ರಸ್ತೆಯ ವಾಟರ್ ಬ್ಯಾಂಡ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ಇಬ್ಬರು ವಿದ್ಯಾರ್ಥಿನಿಯರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ ಮಸ್ಸೂರಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಪ್ರಾರಂಭಿಸಿದವು.
ಗಾಯಗೊಂಡ ವಿದ್ಯಾರ್ಥಿನಿ, ಚಿಕಿತ್ಸೆ ಫಲಕಾರಿಯಾಗದೇ ಸಾವು: ಕಾರಿನಲ್ಲಿ ಸಿಲುಕಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಕಂದಕದಿಂದ ರಕ್ಷಿಸಿ 108 ಆಂಬ್ಯುಲೆನ್ಸ್ ಮೂಲಕ ಡೆಹ್ರಾಡೂನ್ ಹೈಯರ್ ಸೆಂಟರ್‌ಗೆ ಕಳುಹಿಸಲಾಯಿತು. ಆದರೆ, ಅವರಲ್ಲಿ ಒಬ್ಬ ವಿದ್ಯಾರ್ಥಿನಿ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವಳೂ ಸಾವನ್ನಪ್ಪಿದ್ದಾಳೆ. ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರು.
ಅವರ ಮೃತದೇಹಗಳನ್ನು ಹೊರತೆಗೆದು ಮಸ್ಸೂರಿ ಉಪ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಡೆಹ್ರಾಡೂನ್ ಐಎಂಎಸ್ ಕಾಲೇಜಿನಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಹುಡುಗಿಯರು ವಿದ್ಯಾಭ್ಯಾಸ ಮಾಡುತ್ತಿದ್ದರು. ಇವರೆಲ್ಲರೂ ಮಸ್ಸೂರಿಗೆ ಬಂದಿದ್ದರು. ಬೆಳಗ್ಗೆ ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ, ಅವರ ಕಾರು ಚುನಾಖಾನ್ ಬಳಿ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ.
ರಕ್ಷಣಾ ಕಾರ್ಯಾಚರಣೆ: ಅಪಘಾತದ ಸುದ್ದಿ ತಿಳಿದ ತಕ್ಷಣ ಅಕ್ಕಪಕ್ಕದ ಜನರು ಅಪಘಾತ ಸ್ಥಳದತ್ತ ಧಾವಿಸಿದರು. ಇದೇ ವೇಳೆ, ಕೆಲವರು ಈ ಅಪಘಾತದ ಬಗ್ಗೆ ಮಸ್ಸೂರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಬಂದ ತಕ್ಷಣವೇ ಮಸ್ಸೂರಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಆಳವಾದ ಕಂದಕದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ರಕ್ಷಣಾ ತಂಡ ಕಾರು ಬಿದ್ದ ಸ್ಥಳಕ್ಕೆ ತಲುಪಿದಾಗ ಕಾರಿನಲ್ಲಿದ್ದ ನಾಲ್ವರು ಯುವಕರು ಅದಾಗಲೇ ಮೃತಪಟ್ಟಿದ್ದರು. ಇಬ್ಬರು ಹುಡುಗಿಯರು ಉಸಿರಾಡುತ್ತಿದ್ದರು. ಅವರನ್ನು ಚಿಕಿತ್ಸೆಗಾಗಿ ಡೆಹ್ರಾಡೂನ್ ಹೈಯರ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದಾಗ ಒಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮತ್ತೋರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ: ದಿಗ್ನೇಶ್ ಪ್ರತಾಪ್ ಭಾಟಿ (23), ಅಮನ್ ಸಿಂಗ್ ರಾಣಾ (22), ಅಶುತೋಷ್ ತಿವಾರಿ, ಹೃದಯಾಂಶ್ ಚಂದ್ರ(24) ಮತ್ತು ತನುಜಾ (22) ಮಸ್ಸೂರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೀರತ್ ನಿವಾಸಿ ನಯನಶ್ರೀ (24) ಎಂಬ ವಿದ್ಯಾರ್ಥಿನಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಮರು ತನಿಖೆಗೆ ಹೈದರಾಬಾದ್ ಪೊಲೀಸರ ನಿರ್ಧಾರ - Rohit Vemula suicide case