ಉದಯಪುರ, ರಾಜಸ್ಥಾನ: ಗುಂಡಿನ ದಾಳಿಗೆ ಒಳಗಾಗಿದ್ದ ಥಾಯ್ಲೆಂಡ್ ಮಹಿಳೆಯನ್ನು ಅಪರಿಚಿತ ವ್ಯಕ್ತಿಗಳು ಶನಿವಾರ ಇಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಅವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
24 ವರ್ಷದ ಮಹಿಳೆ ಪಕ್ಕೆಲುಬು ಬಳಿ ಗುಂಡಿನ ಗಾಯಕ್ಕೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾತನಾಡಿರುವ ಉದಯಪುರ ಎಸ್ಪಿ ಯೋಗೇಶ್ ಗೋಯಲ್, ವಿದೇಶಿ ಮಹಿಳೆಯೊಬ್ಬರು ಗುಂಡಿನ ದಾಳಿಗೆ ಒಳಗಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ ಎಂಬ ಮಾಹಿತಿ ದೊರೆಯಿತು. ಆರಂಭದ ತನಿಖಾ ಮಾಹಿತಿ ಪ್ರಕಾರ, ಅಕ್ಟೋಬರ್ 21ರಂದು ವಿದೇಶಿ ಮಹಿಳೆ ತಮ್ಮ ಸ್ನೇಹಿತರ ಜೊತೆಗೆ ಇಲ್ಲಿನ ಮಲಿ ಕಾಲೋನಿಯಲ್ಲಿ ಥಂಕ್ ಛನೊಕ್ ಹೋಟೆಲ್ನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ 1.30ರ ಸುಮಾರಿಗೆ ಮಹಿಳೆ ಸ್ನೇಹಿತರ ಭೇಟಿ ಮಾಡಲು ಹೋಟೆಲ್ನಿಂದ ಹೊರಗೆ ತೆರಳಿದ್ದರು , ಈ ವೇಳೆ ಅವರು ಗಾಯೊಂಡಿದ್ದಾರೆ.
ಮಹಿಳೆಯನ್ನು ಮೂವರು ಅಪರಿಚಿತ ವ್ಯಕ್ತಿಗಳು ಇಲ್ಲಿನ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಇದಾದ ಬಳಿಕ ಯಾವುದೇ ಸುಳಿವು ನೀಡದೇ ಅವರು ಹೊರ ನಡೆದಿದ್ದಾರೆ. ಬಳಿಕ ಮಹಿಳೆಯನ್ನು ಮಹಾರಾಣಾ ಭೂಪಾಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಲ್ಲಿನ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಮೂವರು ಅಪರಿಚಿತ ವ್ಯಕ್ತಿಗಳು ಯಾರು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ನಾಯಿ ಮರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮಹಿಳೆಯರು: ಪ್ರಕರಣ ದಾಖಲು