ETV Bharat / bharat

ಸಿಎಂ ಎಂಬ ಕಾರಣಕ್ಕೆ ತನಿಖೆ ವಿಳಂಬವಾಗಬಾರದು: ಸಿಬಿಐಗೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಸೂಚನೆ - CM Jagan Illegal Assets Case

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಪ್ರಕರಣದಲ್ಲಿ ರಾಜಕೀಯ ಕಾರಣಗಳಿಗಾಗಿ ವಿಚಾರಣೆಯನ್ನು ವಿಳಂಬ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

SUPREME COURT BENCH  DELAYED FOR POLITICAL REASONS  CBI LAWYER  JUSTICE SANJEEV KHANNA
ಸಿಬಿಐಗೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಸೂಚನೆ
author img

By ETV Bharat Karnataka Team

Published : Apr 1, 2024, 1:19 PM IST

ನವದೆಹಲಿ: ಜಗನ್ ಅವರ ಅಕ್ರಮ ಆಸ್ತಿಪಾಸ್ತಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಬಿಐ ತನಿಖೆ ಏಕೆ ವಿಳಂಬವಾಗುತ್ತಿದೆ ಎಂಬ ಕಾರಣ ನೀಡುವಂತೆ ಸೂಚಿಸಿತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಾಂಕರ್ ದತ್ತಾ ಅವರಿದ್ದ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಡಿಸ್ಚಾರ್ಜ್ ಅರ್ಜಿಗಳು ವಿಳಂಬಕ್ಕೆ ಕಾರಣವಾಗುತ್ತಿವೆ ಎಂದು ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ನ್ಯಾಯಾಲಯಕ್ಕೆ ತಿಳಿಸಿದರು. ರಾಜಕೀಯ ಕಾರಣಗಳಿಗಾಗಿ ವಿಚಾರಣೆಯನ್ನು ವಿಳಂಬ ಮಾಡಬಾರದು ಎಂದು ಪೀಠ ಅಭಿಪ್ರಾಯಪಟ್ಟಿದೆ. ವಿಚಾರಣೆ ಸರಿಯಾಗಿ ನಡೆಯುತ್ತಿದೆ ಎಂದು ಸಿಬಿಐ ಪೀಠಕ್ಕೆ ತಿಳಿಸಿತು. ವಿಚಾರಣೆ ಸರಿಯಾಗಿ ನಡೆಯುತ್ತಿದೆ ಅಂತಾ ಹೇಳುವುದಲ್ಲ, ಅಫಿಡವಿಟ್ ಅನ್ನು ಏಕೆ ಸಲ್ಲಿಸಿಲ್ಲ ಎಂಬುದನ್ನು ತಿಳಿಸಿ ಅಂತಾ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದರು.

ಮುಖ್ಯಮಂತ್ರಿಯವರಿಂದಾಗಿ ವಿಚಾರಣೆ ವಿಳಂಬವಾಗುತ್ತಿದೆ ಎಂಬುದೇ ಪ್ರಮುಖ ಆರೋಪವಾಗಿದ್ದು, ಇದಕ್ಕೆ ಏನು ಉತ್ತರ ನೀಡುತ್ತೀರಿ ಎಂದು ಕೋರ್ಟ್ ಹೇಳಿದೆ. ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸಿಎಂ ಏಕೆ ಕೇಳುತ್ತಿದ್ದಾರೆ ಎಂದು ಪೀಠ ಪ್ರಶ್ನಿಸಿತು. ಸುದೀರ್ಘ ಕಾಲ ವಿಚಾರಣೆ ನಡೆಯುತ್ತಿದ್ದರೆ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇಂತಹ ಪ್ರಕರಣಗಳಲ್ಲಿ ತನಿಖೆ ನಡೆಸುವ ನ್ಯಾಯಾಲಯಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಶೀಘ್ರ ವಿಚಾರಣೆ ನಡೆಸುವಂತೆ ಆದೇಶಿಸಲಾಗಿದೆ. ಜಾಮೀನು ರದ್ದತಿ ಹಾಗೂ ವಿಚಾರಣೆಯನ್ನು ಹೈದರಾಬಾದ್‌ನಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 5ರಿಂದ ಪ್ರಾರಂಭವಾಗುವ ವಾರಕ್ಕೆ ಮುಂದೂಡಲಾಯಿತು.

ಜಗನ್ ಅಕ್ರಮ ಆಸ್ತಿ ಪ್ರಕರಣಗಳ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದಿದೆ. ಜಗನ್ ಮತ್ತು ಇತರ ಆರೋಪಿಗಳ ಬಿಡುಗಡೆ ಅರ್ಜಿಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ನಡೆದವು. ಸಿಬಿಐ ಮತ್ತು ಇಡಿ ಪ್ರಕರಣಗಳ ಬಿಡುಗಡೆ ಅರ್ಜಿಗಳ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಈ ತಿಂಗಳ 18 ಕ್ಕೆ ಮುಂದೂಡಿದೆ.

ಓದಿ: ಪ್ರಧಾನಿ ಮೋದಿಯವರು ನನ್ನ ಗಂಡನನ್ನು ಜೈಲಿಗೆ ಹಾಕಿದ್ದು ಸಮರ್ಥನೀಯವೇ?; ಕೇಜ್ರಿವಾಲ್ ಪತ್ನಿ ಸುನಿತಾ ಪ್ರಶ್ನೆ - INDIA Blocs Rally

ETV Bharat Logo

Copyright © 2024 Ushodaya Enterprises Pvt. Ltd., All Rights Reserved.