ನವದೆಹಲಿ: ಇಲ್ಲಿನ ಹಳೆ ರಾಜಿಂದರ್ ನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಗೆ ಕಳೆದ ರಾತ್ರಿ ಮಳೆ ನೀರು ನುಗ್ಗಿ, ಇಬ್ಬರು ಹುಡುಗಿಯರು ಮತ್ತು ಓರ್ವ ಹುಡುಗ ಸೇರಿದಂತೆ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನೂ ಕೆಲವರು ಸಿಲುಕಿರುವ ಶಂಖೆ ಇದ್ದು ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
#WATCH | Search and rescue operation underway at the coaching institute in Old Rajender Nagar, after water was filled in its basement. Several students feared trapped: Delhi Fire Department
— ANI (@ANI) July 27, 2024
(Source: Delhi Fire Department) pic.twitter.com/AxnTgeP98n
ಈ ಕುರಿತು ದೆಹಲಿ ಬಿಜೆಪಿ ನಾಯಕ ರಾಜೇಶ್ ಭಾಟಿಯಾ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ, ಆಮ್ ಆದ್ಮಿ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಈ ರಸ್ತೆಯಲ್ಲಿ ನೀರು ನಿಲ್ಲುತ್ತದೆ. ಭವಿಷ್ಯದಲ್ಲಿ ಗಂಭೀರ ಸಮಸ್ಯೆ ಎದುರಾಗಬಹುದು ಎಂದು ಸ್ಥಳೀಯ ಶಾಸಕ ದುರ್ಗೇಶ್ ಪಾಠಕ್ ಅವರ ಗಮನಕ್ಕೆ ನಿರಂತರವಾಗಿ ತರುತ್ತಿದ್ದೆ. ಹೀಗಿದ್ದರೂ ಅವರು ಗಮನ ಹರಿಸಿಲ್ಲ' ಎಂದು ಆರೋಪಿಸಿದ್ದಾರೆ.
#WATCH | Old Rajender Nagar incident | Delhi: A group of students staged a protest against the MCD outside the place where the basement of a coaching class was filled with water claiming the lives of three students pic.twitter.com/Siyk5C2nDP
— ANI (@ANI) July 27, 2024