ETV Bharat / bharat

ತಿರುಪತಿ ಲಡ್ಡು ಕಲಬೆರಕೆ ವಿವಾದ: ದೇಶಾದ್ಯಂತ ಆಕ್ರೋಶ, ಕೇಂದ್ರ ಸಚಿವರ ಕಿಡಿ - Tirupati Laddu Row - TIRUPATI LADDU ROW

ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದ ಇದೀಗ ಸರ್ಕಾರ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ.

TTD Laddu Row
ಕೇಂದ್ರ ಸಚಿವರು (ETV Bharat)
author img

By ETV Bharat Karnataka Team

Published : Sep 20, 2024, 6:30 PM IST

ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ (ಲಡ್ಡು) ಕಲಬೆರಕೆ ವಿವಾದ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದಿನ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ನಡೆಗೆ ಕಿಡಿಕಾರಿದ್ದಾರೆ.

'ವೈಎಸ್ ಜಗನ್ಮೋಹನ್ ರೆಡ್ಡಿ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ತಿರುಮಲ ಕಾಲೇಜುಗಳಿಂದ ಪದ್ಮಾವತಿ ಮತ್ತು ವೆಂಕಟೇಶ್ವರ ದೇವರ ಚಿತ್ರಗಳನ್ನು ತೆಗೆದು ಹಿಂದೂಯೇತರ ಚಿಹ್ನೆಗಳನ್ನು ಹಾಕಿದೆ. ಇದಲ್ಲದೇ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿಂದೂಯೇತರರನ್ನು ನೇಮಿಸುವ ಮೂಲಕ ಅವಮಾನ ಮಾಡಲಾಗಿದೆ' ಎಂದು ಅವರು ಆರೋಪಿಸಿದರು.

'ದೇವಸ್ಥಾನದ ಪವಿತ್ರ ನೈವೇದ್ಯಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದೆ ಎಂಬ ವಿಚಾರ ಚಿಂತೆಗೀಡು ಮಾಡಿದೆ' ಎಂದು ಅವರು ಕಿಡಿಕಾರಿದರು.

ತನಿಖೆಯ ಮೂಲಕ ಸತ್ಯಾಸತ್ಯತೆ ಹೊರ ಬರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಪ್ರತಿಕ್ರಿಯಿಸಿ, 'ತಿರುಮಲ ತಿರುಪತಿ ಪವಿತ್ರ ಕ್ಷೇತ್ರ. ಇಲ್ಲಿ ಸಿಗುವ ಲಡ್ಡು ಪ್ರಸಾದಗಳಿಗೆ ಪ್ರಾಣಿಗಳ ಕೊಬ್ಬು ಬಳಸುತ್ತಿರುವ ಆರೋಪ ಕೇಳಿ ಬಂದಿದೆ. ಇದನ್ನು ತುಂಬಾ ಗಂಭಿರವಾಗಿ ಪರಿಗಣಿಸಬೇಕು. ತನಿಖೆಯ ಮೂಲಕ ಸತ್ಯಾಸತ್ಯತೆ ಜನಕ್ಕೆ ತಿಳಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು' ಎಂದು ಅವರು ಆಗ್ರಹಿಸಿದರು.

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮಾತನಾಡಿ, 'ತಿರುಪತಿ ಲಡ್ಡು ಕಲಬೆರಕೆ ಕುರಿತು ಸಮಗ್ರ ವರದಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿರುವುದಾಗಿ' ತಿಳಿಸಿದರು. 'ಈ ಬಗ್ಗೆ ಕೇಂದ್ರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಿದೆ' ಎಂದೂ ಕೂಡ ಭರವಸೆ ನೀಡಿದರು.

ಟಿಡಿಪಿಯ ಅಧಿಕೃತ ವಕ್ತಾರ ಆನಂ ವೆಂಕಟರಮಣ ರೆಡ್ಡಿ ಪ್ರತಿಕ್ರಿಯಿಸಿ, 'ಹಿಂದಿನ ಸರ್ಕಾರದ ಅವಧಿಯಲ್ಲಿ ಶ್ರೀವಾರಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ ಮತ್ತು ಗೋಮಾಂಸ ಮತ್ತು ಹಂದಿಯಿಂದ ಪಡೆದ ಎಣ್ಣೆಯನ್ನು ಬೆರೆಸಲಾಗುತ್ತಿತ್ತು. ಇದು ಲಕ್ಷಾಂತರ ಭಕ್ತರ ಭಾವನೆಗಳನ್ನು ಘಾಸಿಗೊಳಿಸಿದೆ' ಎಂದು ಗುಜರಾತ್‌ನ ಎನ್‌ಡಿಡಿಬಿ ಕ್ಯಾಫ್ ಲ್ಯಾಬ್‌ನ ಫಲಿತಾಂಶಗಳನ್ನು ಸಾಕ್ಷ್ಯವಾಗಿ ಉಲ್ಲೇಖಿಸಿದರು.

ಟಿಟಿಡಿ ಮಾಜಿ ಆಡಳಿತ ಮಂಡಳಿ ಸದಸ್ಯ ಓವಿ ರಮಣ, ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವರು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, 'ತಿರುಮಲ ತಿರುಪತಿ ದೇವಸ್ಥಾನವನ್ನು (ಟಿಟಿಡಿ) ಅನ್ಯ ಧರ್ಮದ ವ್ಯಕ್ತಿಗಳಿಗೆ ವಹಿಸಿದ್ದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಅಲ್ಲದೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದಲ್ಲಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇದು ಗಂಭೀರವಾದ ವಿಚಾರ. ಸಮಗ್ರ ತನಿಖೆ ನಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ' ಒತ್ತಾಯಿಸಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಕೂಡ ಬರೆದಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಕರಣ: ಸಂಜೆಯೊಳಗೆ ವರದಿ ನೀಡುವಂತೆ ಟಿಟಿಡಿ ಇಒಗೆ ಸಿಎಂ ಚಂದ್ರಬಾಬು ನಾಯ್ಡು ಆದೇಶ - Tirupati Laddu Row

ETV Bharat Logo

Copyright © 2024 Ushodaya Enterprises Pvt. Ltd., All Rights Reserved.