ETV Bharat / bharat

ತಿರುಪತಿ ಲಡ್ಡು ವಿವಾದ: ತನಿಖೆಗಾಗಿ ಸ್ವತಂತ್ರ ಎಸ್​ಐಟಿ ರಚಿಸಿ ಆದೇಶಿಸಿದ ಸುಪ್ರೀಂ ಕೋರ್ಟ್​ - SC constituted SIT - SC CONSTITUTED SIT

ಲಡ್ಡು ವಿವಾದಕ್ಕೆ ಸಂಬಂಧದ ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದ ಸುಪ್ರೀಂ ಕೋರ್ಟ್​, ಇಂದು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.

Supreme Court
ಸುಪ್ರೀಂ ಕೋರ್ಟ್​ (ETV Bharat)
author img

By ETV Bharat Karnataka Team

Published : Oct 4, 2024, 12:11 PM IST

Updated : Oct 4, 2024, 12:59 PM IST

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್​ ಇಂದು ಸ್ವತಂತ್ರ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.

ಸ್ವತಂತ್ರ ತನಿಖೆಗೆಗ ಆದೇಶಿಸಿರುವ ಪೀಠ, ಎಫ್​ಎಸ್​ಎಸ್​​ಎಐನ ಓರ್ವ ಅಧಿಕಾರಿ, ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತಲಾ ಇಬ್ಬರು ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು ಸದಸ್ಯರ ಸತ್ತಂತ್ರ ವಿಶೇಷ ತನಿಖಾ ತಂಡವನ್ನು ರಚಿಸಲು ಸೂಚನೆ ನೀಡಿದೆ. ಎಸ್​ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್​. ಗಾವಾಯಿ ಮತ್ತು ಕೆ.ವಿ.ವಿಶ್ವನಾಥನ್​ ಅವರಿದ್ದ ದ್ವಿಸದಸ್ಯ ಪೀಠ, ಲಡ್ಡು ವಿಚಾರ ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ ವಿಚಾರ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್​, ನ್ಯಾಯಾಲಯಗಳನ್ನು ರಾಜಕೀಯ ಯುದ್ಧಭೂಮಿಯಾಗಿ ಬಳಸಿಕೊಳ್ಳಲು ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ರಾಜ್ಯ ಸರ್ಕಾರ ರಚಿಸಿರುವ ಎಸ್​ಐಟಿ ತಂಡದ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ ಈ ವಿಷಯ ಕೋಟ್ಯಂತರ ಭಕ್ತರ ಭಾವನೆಗೆ ಸಂಬಂಧಿಸಿರುವ ಕಾರಣ ಸಿಬಿಐ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ತಂಡ ತನಿಖೆ ನಡೆಸುವುದು ಸೂಕ್ತ ಎಂದು ಪೀಠ ಹೇಳಿದೆ.

ಎಫ್​ಐಆರ್​ನಲ್ಲಿನ ಆರೋಪಗಳು ಪ್ರಪಂಚದಾದ್ಯಂತದ ಭಕ್ತರ ಭಾವನೆಗಳುಗೆ ಧಕ್ಕೆ ತರುವಂತಹ ಸಾಮರ್ಥ್ಯ ಹೊಂದಿದೆ ಎಂದು ಪೀಠ ಗಮನಿಸಿದೆ. ಹಿಂದಿನ ವಿಚಾರಣೆಯಲ್ಲಿ ಆಂಧ್ರಪ್ರದೇಶ ಸರ್ಕಾರ ನೇಮಿಸಿದ ಎಸ್​ಐಟಿ ತನಿಖೆಯನ್ನು ಮುಂದುವರಿಸಬಹುದೇ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂಬ ಬಗ್ಗೆ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಅವರನ್ನು ಸುಪ್ರೀಂ ಕೋರ್ಟ್​ ಕೇಳಿತ್ತು.

ವೈಎಸ್​ಆರ್​ಸಿಪಿ ಸಂಸದ ವೈ.ವಿ. ಸುಬ್ಬಾರೆಡ್ಡಿ, ಬಿಜೆಪಿ ಮಾಜಿ ಸಂಸದ ಸುಬ್ರಹ್ಮಣ್ಯಸ್ವಾಮಿ, ಭಕ್ತ ವಿಕ್ರಮ್​ ಸಂಪತ್​ ಹಾಗೂ ಟಿವಿ ಸಂಪಾದಕ ಸುರೇಶ್​ ಅವರು ಕೋಟ್ಯಂತರ ಭಕ್ತರ ಭಾವನೆಗಳಿಗೆ ಸಂಬಂಧಿಸಿದ ಈ ವಿವಾದದ ಕುರಿತು ಸುಪ್ರೀಂ ಕೋರ್ಟ್​ನ ಮಾಜಿ ನ್ಯಾಯಾಧೀಶರ ನಿರ್ದೇಶನದಲ್ಲಿ ವಿಶೇಷ ತನಿಖೆ ನಡೆಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ಶುಕ್ರವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ - Tirupati Laddu Row

Last Updated : Oct 4, 2024, 12:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.