ಚೆನ್ನೈ: ಮೈಸೂರಿನಿಂದ ದರ್ಭಾಂಗಕ್ಕೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಪ್ರಯಾಣಿಕರಿದ್ದ 13 ಬೋಗಿಗಳು ಹಳಿ ತಪ್ಪಿವೆ. ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಮಿಳುನಾಡು ಪೊಲೀಸರು ಮಾಹಿತಿ ನೀಡಿದ್ದಾರೆ.
VIDEO | Mysuru-Darbhanga Express met with an accident near Kavarapettai Railway Station in the Chennai Division, causing derailment of at least two coaches. More details awaited.
— Press Trust of India (@PTI_News) October 11, 2024
(Source: Third Party) pic.twitter.com/ukS2r9WicS
ಪ್ಯಾಸೆಂಜರ್ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಂಬ್ಯುಲೆನ್ಸ್ಗಳು ಸ್ಥಳದಲ್ಲಿವೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಈ ಅವಘಡದಿಂದಾಗಿ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಡಬೇಕಿದ್ದ ರೈಲುಗಳು ವಿಳಂಬವಾಗಿವೆ.
#WATCH | Six coaches of Train No.12578 (MYS-DBG) Mysore to Darbhanga were derailed after it collided with a goods train at around 20.30 hours. No causalities were reported. A few people were injured. The medical relief van and rescue team have started to move from Chennai… https://t.co/X9nIQ6uk3U pic.twitter.com/LPqfeXsF68
— ANI (@ANI) October 11, 2024
ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ, "ರಾತ್ರಿ 8.30ರ ಸುಮಾರಿಗೆ ಕವರೈಪ್ಪೆಟ್ಟೈ ಬಳಿ ಗೂಡ್ಸ್ ರೈಲಿಗೆ ಬಾಗಮತಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಆಂಬ್ಯುಲೆನ್ಸ್ಗಳು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ದಕ್ಷಿಣ ರೈಲ್ವೆಯ ಪ್ರಧಾನ ವ್ಯವಸ್ಥಾಪಕರು, ಚೆನ್ನೈ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
Rear end collision at KAVARAIPPETTAI Railway Station around 20.30 hrs today in Chennai -Gudur section involving Train No.12578 Mysuru – Darbhanga Bagmati Express and a Goods train
— Southern Railway (@GMSRailway) October 11, 2024
Help line numbers at Chennai Division
04425354151
04425330952
044-25330953
044-25354995
ರೈಲ್ವೆ ಇಲಾಖೆ ಚೆನ್ನೈ ವಿಭಾಗದ ಸಹಾಯವಾಣಿ ಸಂಖ್ಯೆ 04425354151 ಮತ್ತು 04424354995 ಕರೆ ಮಾಡಿ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ತಿರುಚಿ: ಹಾರಾಟದ ವೇಳೆ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ; ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್