ಕನೌಜ್ (ಉತ್ತರ ಪ್ರದೇಶ): ಕನೌಜ್ ಜಿಲ್ಲೆಯ ಮೂಲಕ ಹಾದುಹೋಗುವ ಆಗ್ರಾ ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಬೆಳಗ್ಗೆ ಇಕೋ ಕಾರಿಗೆ ಟ್ರಕ್ ಡಿಕ್ಕಿ ಹೊಡೆದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕ ಮತ್ತು ಮುಂಬೈನಿಂದ ಕೆಲವರು ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆಯಲು ಇಕೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಕನ್ನೌಜ್ ಜಿಲ್ಲೆಯ ಮೂಲಕ ಹಾದುಹೋಗುವ ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂಬತ್ತು ಭಕ್ತರ ಸ್ಥಿತಿ ಗಂಭೀರವಾಗಿದೆ. ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಕನೌಜ್‌ನ ಭೀಮರಾವ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಲ್ಗ್ರಾಮ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಟ್ರಕ್ ಡಿಕ್ಕಿಯ ರಭಸಕ್ಕೆ ಮುಂಬೈನ ದತ್ತಾತ್ರೆ ಅವರ ಪುತ್ರ ಅರುಣ್ (68) ಮತ್ತು ಕರ್ನಾಟಕದ ಅರವಿಂದ್ ಅವರ ಪತ್ನಿ ಶೋಭಾ ಎಂಬ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದಲ್ಲದೇ ಕರ್ನಾಟಕದ ಪ್ರಕಾಶ್ ಅವರ ಪುತ್ರ ಆರುಷ್ (9), ವಿಟ್ಟಲ್ ಶಾ ಅವರ ಪುತ್ರ ಅರವಿಂದ್ (64), ಸುರೇಶ್ ಅವರ ಪುತ್ರ ಸುಜಿತ್ (12), ತುಳಸಿದಾಸ್ ಅವರ ಪುತ್ರ ಶುಭ್ (9), ಲಕ್ಷ್ಮಿ (56), ಲಕ್ಷ್ಮಿ (64), ಬಲ್ವಂತ್, ಬದನ್ ಸಿಂಗ್ ಪಾಲ್, ಸುಮನ್, ಮುಂಬೈನ ಹೇಮಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಯುಪಿಡಿಎ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಪೊಲೀಸ್ ತಂಡವು ತಕ್ಷಣವೇ ಎಲ್ಲಾ ಗಾಯಾಳುಗಳನ್ನು ಕನೌಜ್‌ನ ಭೀಮರಾವ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದೆ. ಎಲ್ಲ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಪೊಲೀಸರು, ಗಾಯಾಳುಗಳ ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿನಿಯರು ಸೇರಿ ಆರು ಜನ ಸಾವು - Terrible road accident