ETV Bharat / bharat

ಜಮ್ಮು- ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಹತ - militants killed in Udhampur

author img

By ETV Bharat Karnataka Team

Published : Sep 11, 2024, 6:24 PM IST

ಜಮ್ಮು ಮತ್ತು ಕಾಶ್ಮೀರದ ಉದಮ್​ಪುರದಲ್ಲಿ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ಎನ್​ಕೌಂಟರ್​ಗೆ ಇಬ್ಬರು ಉಗ್ರರು ಖತಂ
ಎನ್​ಕೌಂಟರ್​ಗೆ ಇಬ್ಬರು ಉಗ್ರರು ಖತಂ (ETV Bharat)

ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಕಣಿವೆಯಲ್ಲಿ ಉಗ್ರರ ಉಪಟಳ ಮತ್ತೆ ಶುರುವಾಗಿದೆ. ಉಧಮ್‌ಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ನಡೆದ ಎನ್​​ಕೌಂಟರ್​ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ಇಲ್ಲಿನ ಬಸಂತ್‌ಗಢದ ಖಾನಾರ್ಡ್ ಪ್ರದೇಶದ ಕಾಡುಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆಯಿತು. ಗುಪ್ತಚರ ದಳದ ಮಾಹಿತಿಯ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ.

ಇನ್ನಷ್ಟು ಉಗ್ರರು ಅಡಗಿರುವ ಸಾಧ್ಯತೆ ಹಿನ್ನೆಲೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಹತರಾದ ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಸೇನೆ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಉಧಮ್‌ಪುರವು ಜಮ್ಮು ವಿಭಾಗದ ಪರ್ವತ ಜಿಲ್ಲೆಗಳಲ್ಲಿ ಒಂದಾಗಿದೆ. ಇಲ್ಲಿನ ದಟ್ಟವಾದ ಕಾಡುಗಳಲ್ಲಿ ವಿದೇಶಿ ಉಗ್ರಗಾಮಿಗಳು ಅಡಗಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳಿಂದ ಹಲವಾರು ಬಾರಿ ಉಗ್ರರು ದಾಳಿಯ ಪ್ರದೇಶಗಳನ್ನು ಬದಲಾಯಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮ-ಕಾಶ್ಮೀರದಲ್ಲಿ ಮುಂದುವರಿದ ಎನ್​ಕೌಂಟರ್​: ಕ್ಯಾಪ್ಟನ್​ ಹುತಾತ್ಮ, ನಾಲ್ವರು ಉಗ್ರರ ಹತ್ಯೆ - Doda Encounter

ETV Bharat Logo

Copyright © 2024 Ushodaya Enterprises Pvt. Ltd., All Rights Reserved.