ETV Bharat / bharat

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1.52 ಲಕ್ಷ ಕೋಟಿ ರೂ: ನೈಸರ್ಗಿಕ ಕೃಷಿಗೆ ಉತ್ತೇಜನ - Agriculture Sector

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಸಾಲಿನ ಪೂರ್ಣ ಬಜೆಟ್​ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.

author img

By ETV Bharat Karnataka Team

Published : Jul 23, 2024, 11:46 AM IST

Updated : Jul 23, 2024, 11:57 AM IST

Union Budget 2024  Union budget
2024-25ರ ಕೇಂದ್ರ ಬಜೆಟ್​ನಲ್ಲಿ ಕೃಷಿ ವಲಯಕ್ಕೇನು? (ETV Bharat)

ನವದೆಹಲಿ: ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ಕೃಷಿ ವಲಯಕ್ಕೆ ಸರ್ಕಾರ 1.52 ಲಕ್ಷ ಕೋಟಿ ರೂ ಮೀಸಲಿಟ್ಟಿರುವುದು ಗಮನಾರ್ಹ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸತತ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಅನ್ನು ಇಂದು ಸಂಸತ್ತಿನಲ್ಲಿ ನಿರ್ಮಲಾ ಮಂಡಿಸುತ್ತಿದ್ದಾರೆ.

ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಒತ್ತು ನೀಡಲಾಗಿದೆ.

ಹವಾಮಾನಕ್ಕೆ ಅನುಗುಣವಾಗಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸಂಶೋಧನೆಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ದೊಡ್ಡ ಪ್ರಮಾಣದ ತರಕಾರಿ ಉತ್ಪಾದನಾ ಕ್ಲಸ್ಟರ್‌ಗಳನ್ನು ಉತ್ತೇಜಿಸಲಾಗುವುದು. ರಾಜ್ಯಗಳ ಸಹಭಾಗಿತ್ವದಲ್ಲಿ ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಉತ್ತೇಜಿಸಲು ಸರ್ಕಾರ ನಿರ್ಧರಿಸಿದೆ. ಒಟ್ಟಾರೆ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರ ನೀತಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವೆ ತಿಳಿಸಿದರು.

ಜನ್ ಸಮರ್ಥ್ ಆಧರಿತ ಕಿಸಾನ್ ಕ್ರೆಡಿಟ್ ಕಾರ್ಡ್: ಬೇಳೆಕಾಳುಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರುಕಟ್ಟೆಯನ್ನು ಬಲಪಡಿಸಲು ಸರ್ಕಾರ ಒತ್ತು ನೀಡಿದೆ. ಗ್ರಾಮೀಣ ಆರ್ಥಿಕತೆಯ ವೇಗದ ಬೆಳವಣಿಗೆ ಮತ್ತು ಉದ್ಯೋಗಾವಕಾಶ ಬಜೆಟ್‌ ಗುರಿಯಾಗಿದೆ. ಜೊತೆಗೆ, ಸಿಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಸರ್ಕಾರ ಹಣಕಾಸು ಒದಗಿಸುತ್ತದೆ ಎಂದು ತಿಳಿಸಿದರು. ಜನ್ ಸಮರ್ಥ್ ಆಧರಿತ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು 5 ರಾಜ್ಯಗಳಲ್ಲಿ ಪರಿಚಯಿಸಲಾಗುವುದು. ಹವಾಮಾನ ಸ್ಥಿತಿಸ್ಥಾಪಕ ಬೀಜಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ವಲಯ, ಡೊಮೇನ್ ತಜ್ಞರು ಮತ್ತು ಇತರರಿಗೆ ಹಣ ಒದಗಿಸಲಾಗುವುದು ಎಂದು ತಿಳಿಸಿದರು.

ಬೆಳೆಗಳ ಡಿಜಿಟಲ್ ಸರ್ವೆಗೆ ಒತ್ತು: ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು ನೀಡಲಾಗುತ್ತದೆ. 400 ಜಿಲ್ಲೆಗಳಲ್ಲಿ ಬೆಳೆಗಳ ಡಿಜಿಟಲ್ ಸರ್ವೆಗೆ ಒತ್ತು ನೀಲಾಗುವುದು. ಎಣ್ಣೆ ಬೀಜ ಉತ್ಪಾದನೆಗೆ ಕೇಂದ್ರ ಸರಕಾರವು ಪ್ರಮುಖ ಆದ್ಯತೆ ನೀಡಲಿದೆ. ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ಕೊಡಲಾಗುವುದು. ಸೇವೆ, ಮಹಿಳಾ ಅಭಿವೃದ್ಧಿಗೂ ಬಜೆಟ್‌ನಲ್ಲಿ ಒತ್ತು ನೀಡಲಾಗುವುದು. ಜೊತೆಗೆ ಮಹಿಳೆಯರು, ರೈತರು, ಯುವಕ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ. ಕೊಡಲಾಗುವುದು ಎಂದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ: ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ. ಮತ್ತು ಭರವಸೆಯನ್ನು ಈಡೇರಿಸಿದ್ದೇವೆ. ತರಕಾರಿ ಉತ್ಪಾದನೆ ಮತ್ತು ಪೂರೈಕೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ನೈಸರ್ಗಿಕ ಕೃಷಿಯನ್ನು ಹೆಚ್ಚಿಸಲು ಗಮನಹರಿಸಲಾಗುವುದು. 32 ಬೆಳೆಗಳಿಗೆ 109 ತಳಿಗಳನ್ನು ಪ್ರಾರಂಭಿಸಲಾಗುವುದು. ಒಟ್ಟಾರೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ಕೊಡಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಲೈವ್ ಮೋದಿ 3.0 ಸರ್ಕಾರದ ಮೊದಲ ಬಜೆಟ್‌: 1 ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ - Union Budget 2024

Last Updated : Jul 23, 2024, 11:57 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.