ETV Bharat / bharat

ಲಡಾಖ್​ನಲ್ಲಿ 5 ಹೊಸ ಜಿಲ್ಲೆಗಳ ರಚನೆ: ಕೇಂದ್ರ ಗೃಹಸಚಿವಾಲಯ ಘೋಷಣೆ - new districts in Ladakh

ಲಡಾಖ್​ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಲಡಾಖ್
ಲಡಾಖ್ (IANS)
author img

By PTI

Published : Aug 26, 2024, 12:48 PM IST

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಲಡಾಖ್​​ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಘೋಷಿಸಿದ್ದಾರೆ. ಅಭಿವೃದ್ಧಿ ಹೊಂದಿದ ಸಮೃದ್ಧ ಲಡಾಖ್ ಅನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಅನುಸರಿಸಿ, ಕೇಂದ್ರ ಗೃಹ ಸಚಿವಾಲಯವು ಐದು ಹೊಸ ಜಿಲ್ಲೆಗಳನ್ನು ರಚಿಸಲು ನಿರ್ಧರಿಸಿದೆ ಎಂದು ಶಾ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಜನ್ ಸ್ಕರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ಥಾಂಗ್ ಇವು ಲಡಾಖ್​ನಲ್ಲಿ ಅಸ್ತಿತ್ವಕ್ಕೆ ಬರಲಿರುವ ಹೊಸ ಜಿಲ್ಲೆಗಳಾಗಿವೆ. ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಹೊಸ ಜಿಲ್ಲೆಗಳನ್ನು ರಚಿಸಲಾಗಿದೆ.

ಆಗಸ್ಟ್ 5, 2019 ರಂದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಾಗಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಇದೇ ದಿನ, 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಲಾಗಿತ್ತು. ಸದ್ಯ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ, ಲಡಾಖ್ ಕೇಂದ್ರ ಗೃಹ ಸಚಿವಾಲಯದ ನೇರ ಆಡಳಿತಾತ್ಮಕ ನಿಯಂತ್ರಣದಲ್ಲಿದೆ.

ಲಡಾಖ್ ಪ್ರಸ್ತುತ ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು ಮಾತ್ರ ಹೊಂದಿತ್ತು. ಎರಡೂ ಜಿಲ್ಲೆಗಳು ತಮ್ಮದೇ ಆದ ಸ್ವಾಯತ್ತ ಜಿಲ್ಲಾ ಮಂಡಳಿಗಳನ್ನು ಹೊಂದಿವೆ. ಹೊಸ ಜಿಲ್ಲೆಗಳ ರಚನೆಯ ನಂತರ, ಲಡಾಖ್ ಒಟ್ಟು ಏಳು ಜಿಲ್ಲೆಗಳನ್ನು ಹೊಂದಲಿದೆ. 2019 ರವರೆಗೆ, ಲಡಾಖ್ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿತ್ತು. ಆಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆ ವರ್ಷ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿತು.

ಲಡಾಖ್ ವಿಶ್ವದ ಅತ್ಯಂತ ಪ್ರಸಿದ್ಧ ಭಾರತೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇದು ಮೋಟಾರು ಸೈಕಲ್ ಮೂಲಕ ತಲುಪುವ ಜನಪ್ರಿಯ ತಾಣವೂ ಆಗಿದೆ. ಸಾವಿರಾರು ಮೋಟರ್ ಸೈಕ್ಲಿಸ್ಟ್​ಗಳು ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಾರೆ. ನೈಸರ್ಗಿಕ ಸೌಂದರ್ಯವನ್ನು ಮೀರಿ, ಲಡಾಖ್ ಇತಿಹಾಸ ಮತ್ತು ಸಂಪ್ರದಾಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ನೆಲೆಯಾಗಿದೆ. ಬೇಸಿಗೆಯ ತಿಂಗಳುಗಳಲ್ಲಿ, ಲಡಾಖ್​ ರೋಮಾಂಚಕ ಹಬ್ಬಗಳು, ಸಾಂಪ್ರದಾಯಿಕ ಸಮಾರಂಭಗಳು ಮತ್ತು ವರ್ಣರಂಜಿತ ಮಾರುಕಟ್ಟೆಗಳೊಂದಿಗೆ ಕಣ್ಮನ ಸೆಳೆಯುತ್ತದೆ. ಬೇಸಿಗೆಯಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಸ್ಥಳೀಯ ಸಮುದಾಯಗಳೊಂದಿಗೆ ಬೆರೆತು ಅವರ ಪದ್ಧತಿಗಳು ಮತ್ತು ಸಂಪ್ರದಾಯಗಳ ಬಗ್ಗೆ ತಿಳಿಯಬಹುದು.

ಇದನ್ನೂ ಓದಿ : ಮಲಯಾಳಂ ನಟಿಯರ ಮೇಲೆ ದೌರ್ಜನ್ಯ ಆರೋಪ: ತನಿಖೆಗೆ ವಿಶೇಷ ತಂಡ ರಚಿಸಿದ ಕೇರಳ ಸರ್ಕಾರ - Sexual Assault Allegations

ETV Bharat Logo

Copyright © 2024 Ushodaya Enterprises Pvt. Ltd., All Rights Reserved.