ETV Bharat / bharat

ಮೈಸೂರಿನಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ ; ಹೆಚ್​ಡಿಕೆ ಮನವಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಸ್ತು - RPF TRAINING CENTER

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೆ ಆರ್ ​ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

union-railway-minister-ashwini-vaishnaw and H D Kumaraswamy
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : 22 hours ago

ನವದೆಹಲಿ/ ಮೈಸೂರು : ಮೈಸೂರಿನ ಕೆ. ಆರ್ ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು, ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯ ಕೆ. ಆರ್ ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೈಲ್ವೆ ಸಚಿವರಿಗೆ ಕುಮಾರಸ್ವಾಮಿ ಮನವಿ ಪತ್ರ ಸಲ್ಲಿಸಿದರು. ರೈಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಣೆಯು ಹೆಚ್ಚಾಗಿದ್ದು, ಒಟ್ಟಾರೆ ರೈಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದರು.

ಹೆಚ್​ ಡಿ ದೇವೇಗೌಡರು ಪ್ರಧಾನಿಯಾಗಿದ್ದಾಗ ಕೆ. ಆರ್ ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.

ಇದಲ್ಲದೆ, ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೈಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೈಲ್ವೆ ಸಚಿವರ ಜತೆ ಚರ್ಚಿಸಿದರು.

ರಾಮನಗರ - ಚನ್ನಪಟ್ಟಣ ನಡುವೆ ರೈಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೈಲ್ವೆ ಮೇಲ್ಸೆತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೈಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರು - ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೈಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ್ ಅವರು ಸಚಿವರಿಗೆ ತಿಳಿಸಿದರು.

ರೈಲ್ವೆ ಸಚಿವರಿಗೆ ಹೆಚ್​ಡಿಕೆ ಮಾಡಿದ ಮನವಿಗಳು :

  • ಚನ್ನಪಟ್ಟಣ - ಬೆಂಗಳೂರು - ಮೈಸೂರು ವಿಭಾಗದಲ್ಲಿ ಪ್ರಮುಖವಾದ ಎಲ್ಲಾ ರೈಲುಗಳ ನಿಲುಗಡೆ.
  • ಹಾಸನ, ಮಂಗಳೂರು ಒಳಗೊಂಡ ಮುಂಬೈ - ಬೆಂಗಳೂರು - ಮುಂಬೈ ಮಾರ್ಗದಲ್ಲಿ ಹೊಸ ರೈಲು ಮಂಜೂರು.
  • ಮದ್ದೂರು ಮತ್ತು ಮಂಡ್ಯದಲ್ಲಿ ಬೆಂಗಳೂರು - ಮಂಗಳೂರು - ಮುರುಡೇಶ್ವರ ನಡುವೆ ಸಂಚರಿಸುವ 16585 ರೈಲಿನ ನಿಲುಗಡೆ.
  • ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗಗಳ ಮಂಜೂರಾತಿ.
  • ಹೆಜ್ಜಾಲ- ಕನಕಪುರ - ಮಳವಳ್ಳಿ - ಕೊಳ್ಳೇಗಾಲ - ಯಳಂದೂರು - ಚಾಮರಾಜನಗರ ರೈಲು ಮಾರ್ಗಕ್ಕೆ ಶೀಘ್ರ ಅನುಮತಿ.

    ''ರಾಜ್ಯಕ್ಕೆ ಸಂಬಂಧಪಟ್ಟ ಇಷ್ಟೂ ಮನವಿಗಳಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ರೈಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುವುದು ಹಾಗೂ ಹೊಸ ಯೋಜನೆಗಳ ಬಗ್ಗೆಯೂ ಅಗತ್ಯ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ'' ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

    ಉಕ್ಕು ಮತ್ತು ಅದಿರು ಸಾಗಣಿಕೆಗೆ ರೈಲ್ವೆ ಸಹಕಾರ
  • ದೇಶಾದ್ಯಂತ ಉಕ್ಕು ಮತ್ತು ಅದಿರು ಸಾಗಾಣಿಕೆಗೆ ರೈಲ್ವೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಉಕ್ಕು ಸಚಿವರಿಗೆ ರೈಲ್ವೆ ಸಚಿವರು ಭರವಸೆ ಕೊಟ್ಟರು.
  • ರೈಲ್ವೆ ವಶದಲ್ಲಿರುವ ಖಾಲಿ ಜಾಗದಲ್ಲಿ ಅದಿರು ಸಾಗಾಣಿಕೆಗೆ ಪೈಪ್ ಲೈನ್ ನಿರ್ಮಾಣಕ್ಕೆ ಅವಕಾಶ, ಅದಿರು ಮತ್ತು ಉಕ್ಕು ಸಾಗಾಣಿಕೆಗೆ ಹೆಚ್ಚುವರಿ ರಾಕ್​ಗಳನ್ನು ಒದಗಿಸಬೇಕು ಎಂಬ ಮಾನವಿಗೂ ರೈಲ್ವೆ ಸಚಿವರು ಸ್ಪಂದಿಸಿದರು. ಜತೆಗೆ, ಇಬ್ಬರು ಸಚಿವರೂ ರಾಷ್ಟ್ರದ ಅಭಿವೃದ್ಧಿ ಹಾಗೂ ಹಲವಾರು ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

    ಇದೇ ವೇಳೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರ ಜತೆ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಕಾಶೆಂಪೂರ್ ಹಾಗೂ ಸಾ. ರಾ ಮಹೇಶ್ ಅವರು ಇದ್ದರು.

    150 ರಿಂದ 200 ಕೋಟಿ ಹೂಡಿಕೆ ; ಪ್ರತೀ ವರ್ಷ 600 ಮಂದಿಗೆ ತರಬೇತಿ : ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ಕೇಂದ್ರ ಸಚಿವರ ಜತೆಯಲ್ಲಿದ್ದ ಮಾಜಿ ಸಚಿವ ಸಾ. ರಾ ಮಹೇಶ್ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡರು.

''ತರಬೇತಿ ಕೇಂದ್ರಕ್ಕೆ ಕೇಂದ್ರ ಸರ್ಕಾರ ₹150 ರಿಂದ 200 ಕೋಟಿ ರೂ. ಹೂಡಿಕೆ ಮಾಡಲಿದೆ. ಪ್ರತೀ ವರ್ಷ 600 ಮಂದಿಗೆ ತರಬೇತಿ ದೊರೆಯಲಿದೆ. ಮೈಸೂರು ಅದರಲ್ಲಿಯೂ ಕೆ. ಆರ್ ನಗರ ತಾಲೂಕು ಅಭಿವೃದ್ಧಿಗೆ ದೊಡ್ಡ ಕೊಡುಗೆ ಸಿಕ್ಕಿದಂತೆ ಆಗುತ್ತದೆ. ಸ್ಥಳೀಯರಿಗೆ ಹೆಚ್ಚೆಚ್ಚು ಉದ್ಯೋಗ ಲಭ್ಯವಾಗಲಿದೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಮಂಡ್ಯ ಸಂಸದರು, ಕೇಂದ್ರದ ಬೃಹತ್ ಕೈಗಾರಿಕೆ - ಉಕ್ಕು ಖಾತೆ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ'' ಎಂದು ಜೆಡಿಎಸ್ ಮುಖಂಡ ಸಾ. ರಾ ಮಹೇಶ್ ತಿಳಿಸಿದರು.

ಇದನ್ನೂ ಓದಿ : ದೇಶದ ಎಲ್ಲ ರೈಲು ಮಾರ್ಗಗಳಲ್ಲಿ 'ಕವಚ' ಸುರಕ್ಷತಾ ವ್ಯವಸ್ಥೆ ಅಳವಡಿಕೆ: ಅಶ್ವಿನಿ ವೈಷ್ಣವ್ - Kavach System - KAVACH SYSTEM

ETV Bharat Logo

Copyright © 2025 Ushodaya Enterprises Pvt. Ltd., All Rights Reserved.