ETV Bharat / bharat

ಉತ್ತರ ಪ್ರದೇಶ: 27 ವರ್ಷದ ನ್ಯಾಯಾಧೀಶೆ ಶವವಾಗಿ ಪತ್ತೆ - Woman judge found dead

ಮಹಿಳಾ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.

junior-civil-judge-in-badaun-court-commits-suicide
ಉತ್ತರ ಪ್ರದೇಶ: 27 ವರ್ಷದ ನ್ಯಾಯಾಧೀಶೆ ಶವವಾಗಿ ಪತ್ತೆ
author img

By PTI

Published : Feb 3, 2024, 10:27 PM IST

ಬದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಶನಿವಾರ ಮಹಿಳಾ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

27 ವರ್ಷದ ಜ್ಯೋತ್ಸ್ನಾ ರಾಯ್ ಎಂಬುವವರೇ ಮೃತ ನ್ಯಾಯಾಧೀಶೆ. ಇವರು ಬುಡೌನ್‌ ನ್ಯಾಯಾಲಯದಲ್ಲಿ ಕಿರಿಯ ಸಿವಿಲ್ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಇಲ್ಲಿನ ಜಡ್ಜ್ ಕಾಲೋನಿ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ವಾಸವಾಗಿದ್ದರು. ತಮ್ಮ ಬೆಡ್​ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬುದೌನ್‌ನ ಹಿರಿಯ ಪೊಲೀಸ್ ಅಧೀಕ್ಷಕ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.

ಡೆತ್​ನೋಟ್​ ಪತ್ತೆ: ಶನಿವಾರ ಬೆಳಗ್ಗೆ 10 ಗಂಟೆಯಾದರೂ ಜ್ಯೋತ್ಸ್ನಾ ರಾಯ್ ಕೋರ್ಟ್​ಗೆ ಹೋಗಿರಲಿಲ್ಲ. ಇದರಿಂದ ಸಹ ನ್ಯಾಯಾಧೀಶರು ಜ್ಯೋತ್ಸ್ನಾ ಅವರ ಮೊಬೈಲ್​ಗೆ ಕರೆ ಮಾಡಿದ್ದರು. ಆದರೆ, ಆ ಕರೆ ಸ್ವೀಕರಿಸದಿದ್ದಾಗ ನೇರವಾಗಿ ಮನೆಗೆ ಬಂದಿದ್ದರು. ಆಗ ಬೆಡ್​ರೂಮ್​ನಲ್ಲಿ ಜ್ಯೋತ್ಸ್ನಾ ಒಳಗಿನಿಂದ ಲಾಕ್ ಹಾಕಿಕೊಂಡಿರುವುದು ಗೊತ್ತಾಗಿದೆ. ನಂತರ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಡ್ ರೂಮ್​ನ ಬಾಗಿಲು ಒಡೆದಿದ್ದಾರೆ. ಬೆಡ್ ರೂಮ್ ಪಕ್ಕದ ಕೊಠಡಿಯಲ್ಲಿ ನ್ಯಾಯಾಧೀಶೆ ಜ್ಯೋತ್ಸ್ನಾ ಶವ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೇ, ಘಟನಾ ಸ್ಥಳದಲ್ಲಿ ಡೆತ್​ನೋಟ್​ ಸಹ ದೊರೆತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾನಸಿಕ ಒತ್ತಡದಿಂದ ಸಾವಿಗೆ ಶರಣು? ಮೃತ ಜ್ಯೋತ್ಸ್ನಾ ರಾಯ್ ಮೌ ಜಿಲ್ಲೆಯವರಾಗಿದ್ದಾರೆ. ಕಳೆದ ವರ್ಷ ಏಪ್ರಿಲ್ 29ರಂದು ಬುದೌನ್‌ನಲ್ಲಿ ಕಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾಗಿ ಕರ್ತವ್ಯಕ್ಕೆ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅಯೋಧ್ಯೆಯಲ್ಲಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಡೆತ್​ನೋಟ್​ ಸೇರಿದಂತೆ ಕೆಲವು ದಾಖಲೆಗಳನ್ನು ಕೊಠಡಿಯಿಂದ ವಶಪಡಿಸಿಕೊಳ್ಳಲಾಗಿದೆ. ಮೇಲ್ನೋಟಕ್ಕೆ ಮಾನಸಿಕ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆಯೂ ವ್ಯಕ್ತವಾಗಿದೆ ಅವರು ಹೇಳಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಲಾಗಿದೆ. ಈ ಘಟನೆ ಬಗ್ಗೆ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ ಎಂದು ಎಸ್‌ಎಸ್‌ಪಿ ಪ್ರಿಯದರ್ಶಿ ವಿವರಿಸಿದ್ದಾರೆ. ಈ ಘಟನೆಯ ವಿಷಯ ತಿಳಿದು ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್​ ಠಾಣೆಯೊಳಗೆ ಗುಂಡು ಹಾರಿಸಿದ ಬಿಜೆಪಿ ಶಾಸಕ: ಶಿಂಧೆ ಶಿವಸೇನಾ ನಾಯಕನಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.