ETV Bharat / bharat

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್​ ಬಹದ್ದೂರ್​ ಶಾಸ್ತ್ರಿ ಮೊಮ್ಮಗ ವಿಭಕರ್​ ಶಾಸ್ತ್ರಿ - ಬಿಜೆಪಿ ಸೇರಿದ ವಿಭಕರ್​ ಶಾಸ್ತ್ರಿ

ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಮೊಮ್ಮಗ ವಿಭಕರ್​ ಶಾಸ್ತ್ರಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ.

vibhakar-shastri-grandson-of-former-pm-lal-bahadur-shastri-joins-bjp
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್​ ಬಹದ್ದೂರ್​ ಶಾಸ್ತ್ರಿ ಮೊಮ್ಮಗ ವಿಭಕರ್​ ಶಾಸ್ತ್ರಿ
author img

By ANI

Published : Feb 14, 2024, 3:18 PM IST

ಲಖನೌ(ಉತ್ತರ ಪ್ರದೇಶ): ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿಯವರ ಮೊಮ್ಮಗ ವಿಭಕರ್​ ಶಾಸ್ತ್ರಿ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇಂದು ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಠಾಕ್​ ಸಮ್ಮುಖದಲ್ಲಿ ಆಡಳಿತಾರೂಢ ಬಿಜೆಪಿ ಸೇರಿದರು.

2009ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಪತೇಪುರ್​ ಕ್ಷೇತ್ರದಿಂದ ವಿಭಕರ್​ ಶಾಸ್ತ್ರಿ ಸ್ಪರ್ಧಿಸಿದ್ದರು. ಕಾಂಗ್ರೆಸ್​ನಿಂದ ಕಣಕ್ಕಿಳಿದಿದ್ದ ಅವರು ಸೋಲು ಕಂಡಿದ್ದರು. ಇದೀಗ 2024ರ ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್​ ತ್ಯಜಿಸಿದ್ದಾರೆ. ಈ ಕುರಿತು ಇಂದು ಬೆಳಗ್ಗೆಯಷ್ಟೇ ಸಾಮಾಜಿಕ ಜಾಲತಾಣ 'ಎಕ್ಸ್​'ನಲ್ಲಿ ಪೋಸ್ಟ್​ ಹಾಕಿದ್ದ ಅವರು, 'ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ' ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟ್ಯಾಗ್​ ಮಾಡಿದ್ದರು.

ಇದಾದ ಸ್ವಲ್ಪ ಹೊತ್ತಿನಲ್ಲೇ ವಿಭಕರ್​ ಶಾಸ್ತ್ರಿ ಬಿಜೆಪಿ ಸೇರಿದ್ದು, ''ಲಾಲ್​ ಬಹದ್ದೂರ್​ ಶಾಸ್ತ್ರಿಯವರ 'ಜೈ ಜವಾನ್, ಜೈ ಕಿಸಾನ್​' ಧ್ಯೇಯವಾಕ್ಯದಂತೆ ನಾನು ದೇಶಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಅಭಿವೃದ್ಧಿ ಹೊಂದಿದ ಹಾಗೂ ವಿಶ್ವದ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ'' ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್‌ ತೊರೆದವರು: ಎರಡು ದಿನಗಳ ಹಿಂದೆಯಷ್ಟೇ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್​ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ಮತ್ತೊಬ್ಬ ನಾಯಕ ಮಿಲಿಂದ್ ದಿಯೋರಾ ಹಾಗು ಮಾಜಿ ಶಾಸಕ ಬಾಬಾ ಸಿದ್ದಿಕ್ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ವಿಭಕರ್​ ಶಾಸ್ತ್ರಿ ಕಾಂಗ್ರೆಸ್​ನಿಂದ ಹೊರಬಂದಿದ್ದಾರೆ.

ಇದನ್ನೂ ಓದಿ: 'ನನ್ನ ರಾಜಕೀಯ ಜೀವನದ ಹೊಸ ಆರಂಭ': ಬಿಜೆಪಿ ಸೇರಿದ ಮಾಜಿ ಸಿಎಂ ಅಶೋಕ್​ ಚವಾಣ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.