ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಸಂಸದೀಯ ಸಮಿತಿಯ ಸದಸ್ಯರು ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯು ಪ್ರಸ್ತುತ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ಮಧ್ಯೆ ಸಂಘರ್ಷದ ವಿಷಯವಾಗಿರುವುದು ಗಮನಾರ್ಹ. ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ತಿದ್ದುಪಡಿಗಳ ಕ್ರೋಢೀಕೃತ ಪಟ್ಟಿಯನ್ನು ಭಾನುವಾರ ತಡರಾತ್ರಿ ಪ್ರಕಟಿಸಿದೆ.
ಸೋಮವಾರ ನಡೆಯಲಿರುವ ಸಭೆಯಲ್ಲಿ ಸಮಿತಿಯು ತಾನು ಸೂಚಿಸಿರುವ ಪ್ರತಿಯೊಂದು ತಿದ್ದುಪಡಿಯ ಬಗ್ಗೆ ಚರ್ಚಿಸಲಿದೆ. ಬಿಜೆಪಿ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಿದ್ದಾರೆ. ಆದಾಗ್ಯೂ, ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳು ಇಲ್ಲ.
ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ನಂತರ ಆಗಸ್ಟ್ 8 ರಂದು ಅದನ್ನು ಮುಂದಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು.
ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವಲ್ಲಿ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಈ ಮಸೂದೆ ಹೊಂದಿದೆ.
ಇದನ್ನೂ ಓದಿ : ಟಂಗ್ಸ್ಟನ್ ಗಣಿಗಾರಿಕೆ ವಿರುದ್ಧದ ಪ್ರತಿಭಟನೆ ; 11,608 ಜನರ ಮೇಲಿನ ಕೇಸ್ ಹಿಂಪಡೆದ ತಮಿಳುನಾಡು ಸರ್ಕಾರ - TUNGSTEN PROTEST