ನವದೆಹಲಿ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 93ಕ್ಕೆ ಏರಿಕೆ ಆಗಿದೆ. 98ಕ್ಕೂ ಹೆಚ್ಚು ಮಂದಿ ನಾಪತ್ತೆ ಆಗಿದ್ದಾರೆ. ಈ ಘಟನೆಯಲ್ಲಿ ಆದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ.
I am deeply anguished by the massive landslides near Meppadi in Wayanad. My heartfelt condolences go out to the bereaved families who have lost their loved ones. I hope those still trapped are brought to safety soon.
— Rahul Gandhi (@RahulGandhi) July 30, 2024
I have spoken to the Kerala Chief Minister and the Wayanad…
'ವಯನಾಡ್ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
Distressed by the landslides in parts of Wayanad. My thoughts are with all those who have lost their loved ones and prayers with those injured.
— Narendra Modi (@narendramodi) July 30, 2024
Rescue ops are currently underway to assist all those affected. Spoke to Kerala CM Shri @pinarayivijayan and also assured all possible…
'ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ' ಎಂದು ಅವರು ತಿಳಿಸಿದ್ದಾರೆ.
ಕೇಂದ್ರದಿಂದ ಪರಿಹಾರ ಘೋಷಣೆ: ಇದೇ ವೇಳೆ, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.
ಮತ್ತೊಂದೆಡೆ, ಕೇರಳದ ಇಬ್ಬರು ಕೇಂದ್ರ ಸಚಿವರಾದ ಸುರೇಶ್ ಗೋಪಿ ಮತ್ತು ಜಾರ್ಜ್ ಕುರಿಯನ್ ಅವರೊಂದಿಗೆ ಮೋದಿ ಮಾತನಾಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಲು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2024
ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ…
ಸಿಎಂ ಜೊತೆ ರಾಹುಲ್ ಮಾತು: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಸಿಎಂ ಪಿಣರಾಯಿ ವಿಜಯನ್ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದಾರೆ. 'ವಯನಾಡ್ನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಅವಶೇಷಗಳಲ್ಲಿ ಸಿಲುಕಿವರರನ್ನು ಶೀಘ್ರದಲ್ಲೇ ರಕ್ಷಣೆ ಮಾಡಿ, ಸುರಕ್ಷಿತ ಸ್ಥಳಕ್ಕೆ ಕರೆತರುವ ವಿಶ್ವಾಸವಿದೆ. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ' ಎಂದು ರಾಹುಲ್ ಪೋಸ್ಟ್ ಮಾಡಿದ್ದಾರೆ.
''ಎಲ್ಲ ಏಜೆನ್ಸಿಗಳೊಂದಿಗೆ ಸಮನ್ವಯ ಖಚಿತಪಡಿಸಿಕೊಳ್ಳಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಪ್ರಯತ್ನಗಳಿಗೆ ಅಗತ್ಯವಿರುವ ಯಾವುದೇ ನೆರವಿನ ಬಗ್ಗೆ ನಮಗೆ ತಿಳಿಸಲು ನಾನು ಅವರಿಗೆ ವಿನಂತಿಸಿದ್ದೇನೆ. ಕೇಂದ್ರ ಸಚಿವರೊಂದಿಗೂ ಮಾತನಾಡಿ ವಯನಾಡ್ಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡುವಂತೆ ಎಲ್ಲ ಯುಡಿಎಫ್ ಕಾರ್ಯಕರ್ತರಿಗೂ ಕೋರುತ್ತೇನೆ'' ಎಂದು ತಿಳಿಸಿದ್ದಾರೆ.
ಅಪಾಯದ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಿ -ಹೆಚ್ಡಿಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, 'ವಯನಾಡ್ ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟುಮಾಡಿದೆ. ಇನ್ನೂ ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ' ಎಂದು ತಿಳಿಸಿದ್ದಾರೆ.
''ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರ್ಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು'' ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ವಯನಾಡ್ನಲ್ಲಿ ಮಳೆಗೆ ಭೀಕರ ಭೂಕುಸಿತ: ಮೂವರು ಮಕ್ಕಳು ಸೇರಿ 15 ಮಂದಿ ಸಾವು