ETV Bharat / bharat

ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರ ಪ್ರತಿಭಟನೆ, ಮಾತುಕತೆ ಭಾಗಶಃ ಯಶಸ್ವಿ - Kolkata Rape And Murder Case - KOLKATA RAPE AND MURDER CASE

ಆರ್​.ಜಿ.ಕರ್​ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಕುಟುಂಬಕ್ಕೆ ಹಣದ ಆಮಿಷವೊಡ್ಡಿದ ರಾಜ್ಯ ವೈದ್ಯಕೀಯ ಶಿಕ್ಷಣದ ನಿರ್ದೇಶಕರು ಮತ್ತು ಆರೋಗ್ಯ ಸೇವೆಗಳ ನಿರ್ದೇಶಕರ ಜೊತೆಗೆ ಉತ್ತರ ವಿಭಾಗದ ಉಪ ಆಯುಕ್ತರನ್ನು ನೌಕರಿಯಿಂದ ತೆಗೆದು ಹಾಕುವುದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಸಮಾಧಾನಪಡಿಸಲು ಸಿಎಂ ಮುಂದಾಗಿದ್ದಾರೆ.

West Bengal government accepted the bulk of the five point charter of demand
ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ (ANI)
author img

By ETV Bharat Karnataka Team

Published : Sep 17, 2024, 11:36 AM IST

ಕೋಲ್ಕತ್ತಾ: ಕೋಲ್ಕತ್ತಾ ಪೊಲೀಸ್ ಇಲಾಖೆ​ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ವರ್ಗಾವಣೆಯೂ ಸೇರಿದಂತೆ ಪ್ರತಿಭಟನಾನಿರತ ವೈದ್ಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸೋಮವಾರ ಭರವಸೆ ನೀಡಿದ್ದಾರೆ.

ಇಂದು ಸಂಜೆ (ಮಂಗಳವಾರ) ಸುಪ್ರೀಂ ಕೋರ್ಟ್‌ನಲ್ಲಿ​ ವಿಚಾರಣೆ ಮುಗಿದ ಬಳಿಕ ನಾಲ್ಕು ಗಂಟೆಯ ಸುಮಾರಿಗೆ ನೂತನ ಪೊಲೀಸ್​ ಆಯುಕ್ತರ ಹೆಸರನ್ನು ಘೋಷಿಸುವುದಾಗಿ ಅವರು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿವರೆಗೂ ಕಾಳಿಘಾಟ್​ನಲ್ಲಿರುವ ಸಿಎಂ ನಿವಾಸದಲ್ಲಿ ಪ್ರತಿಭಟನಾನಿರತ ವೈದ್ಯರ ಜೊತೆಗೆ ಸಿಎಂ ಮಮತಾ ಬ್ಯಾನರ್ಜಿ ಮಾತುಕತೆ ನಡೆಸಿದರು.

ಸೋಮವಾರ ನಡೆದ ಅಂತಿಮ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆ ಅಂತ್ಯಗೊಳಿಸುವ ಸಂಬಂಧ 42 ವೈದ್ಯರ ನಿಯೋಗ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಸಭೆಯ ನಡಾವಳಿಯ ನಿರ್ಧಾರಕ್ಕೆ ಸಹಿ ಹಾಕಿದೆ. ಈ ಮೂಲಕ 38 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಲು ವೈದ್ಯರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಆಗಸ್ಟ್​ 9ರಂದು ರಾಜ್ಯ ಸರ್ಕಾರದ ಆರ್​.ಜಿ.ಕರ್​ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆಸಿದ ಅತ್ಯಾಚಾರ ಹಾಗು ಕೊಲೆಯ ಬಳಿಕ ಘಟನೆ ಖಂಡಿಸಿ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದರು.

ವೈದ್ಯರ ನಿಯೋಗದೊಂದಿಗಿನ ಮಾತುಕತೆಯ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, "ನಾವು ವೈದ್ಯರ ಎಲ್ಲ ಬೇಡಿಕೆಗಳನ್ನು ಸ್ವೀಕರಿಸಿದ್ದೇವೆ. ಸಾಮಾನ್ಯ ಜನರನ್ನು ಮನಸ್ಸಿನಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡುತ್ತೇನೆ. ಪ್ರತಿಭಟನಾನಿರತ ವೈದ್ಯರ ಮೇಲೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳುವುದಿಲ್ಲ" ಎಂದು ಭರವಸೆ ನೀಡಿದರು.

ಆದಾಗ್ಯೂ, ಈ ಭರವಸೆಗಳು ಜಾರಿಯಾಗುವವರೆಗೆ ನಾವು ಹೋರಾಟ ಮುಂದುವರೆಸಲಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕಿರಿಯ ವೈದ್ಯರೊಂದಿಗೆ ಅಂತಿಮ ಹಂತದ ಮಾತುಕತೆಗೆ ಮುಂದಾದ ಸಿಎಂ ಮಮತಾ; ಇಂದು ಸಂಜೆ 5ಕ್ಕೆ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.