ETV Bharat / bharat

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮಸೂದೆ ಅಂಗೀಕರಿಸಿದ ಪಶ್ಚಿಮ ಬಂಗಾಳ: ರಾಜ್ಯಪಾಲರ ಅಂಕಿತ ಬಾಕಿ - Aparajita anti rape bill pass - APARAJITA ANTI RAPE BILL PASS

ಪಶ್ಚಿಮಬಂಗಾಳದಲ್ಲಿ ನಡೆದ ಸರಣಿ ಅತ್ಯಾಚಾರ ಪ್ರಕರಣಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ, ರೇಪಿಸ್ಟ್​​ಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ಇಂದು ಮಂಡಿಸಿ ಅಂಗೀಕರಿಸಿದೆ.

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮಸೂದೆ ಅಂಗೀಕರಿಸಿದ ಪಶ್ಚಿಮಬಂಗಾಳ
ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮಸೂದೆ ಅಂಗೀಕರಿಸಿದ ಪಶ್ಚಿಮಬಂಗಾಳ (ANI)
author img

By ANI

Published : Sep 3, 2024, 5:42 PM IST

Updated : Sep 3, 2024, 5:52 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಬಂಗಾಳದ ವೈದ್ಯೆ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಕೇಸ್​ ದೇಶಾದ್ಯಂತ ಸಂಚಲನ ಉಂಟು ಮಾಡಿದ ಬಳಿಕ ಎಚ್ಚೆತ್ತುಕೊಂಡಿರುವ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ, ಅತ್ಯಾಚಾರಿಗಳ ಹೆಡೆಮುರಿ ಕಟ್ಟಲು ಕಠಿಣ ಕಾನೂನುಗಳುಳ್ಳ ಮಸೂದೆಯನ್ನು ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಗಳವಾರ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ-2024ಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ರಾಜ್ಯಪಾಲರ ಸಹಿ ಬಳಿಕ ಇದು ಕಾನೂನಾಗಿ ಜಾರಿಯಾಗಲಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿಣ ಕ್ರಮವನ್ನು ಮಸೂದೆಯಲ್ಲಿ ನಮೂದಿಸಲಾಗಿದೆ. ವಿಪಕ್ಷ ಬಿಜೆಪಿ ಸೂಚಿಸಿದ ಕೆಲ ತಿದ್ದುಪಡಿಗಳನ್ನು ಸರ್ಕಾರ ಪರಿಗಣಿಸಿಲ್ಲ.

ಮಸೂದೆಯಲ್ಲಿನ ಕಠಿಣ ಅಂಶಗಳಿವು

  • ಆರೋಪಿಯು ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದು ದೃಢಪಟ್ಟರೆ, ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
  • ಅತ್ಯಾಚಾರ ಸಾಬೀತಾದಲ್ಲಿ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಗಲ್ಲಿಗೇರಿಸುವ ಪ್ರಸ್ತಾಪ ಇದರಲ್ಲಿದೆ.
  • ಅತ್ಯಾಚಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಬಳಿಕ 'ಪೆರೋಲ್​' ರಹಿತ ಸೆರೆವಾಸ ಅನುಭವಿಸಬೇಕು.

ದುಷ್ಕೃತ್ಯಗಳಿಗೆ ಕಡಿವಾಣ: ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಮಸೂದೆಯ ಮೇಲೆ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಮಹಿಳೆಯರ ಘನತೆಯನ್ನು ಕಾಪಾಡಲು ಮಸೂದೆ ತರಲಾಗುತ್ತಿದೆ. ಜನರು ಕಾನೂನು ದುರ್ಬಳಕೆ ಮಾಡಿಕೊಂಡರೆ ಸಮಾಜದಲ್ಲಿ ಅಶಾಂತಿ ಉಂಟಾಗಲಿದೆ. ಹೀಗಾಗಿ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಕಠಿಣ ಮಸೂದೆ ಜಾರಿಗೆ ತರಲಾಗುವುದು ಎಂದು ಹೇಳಿದರು.

ಬಂಗಾಳದಲ್ಲಿ 88 ತ್ವರಿತ ನ್ಯಾಯಾಲಯಗಳಿವೆ. ಅದರಲ್ಲಿ 52 ಮಹಿಳೆಯರಿಗಾಗಿ ನಿಗದಿ ಮಾಡಿದ ಕೋರ್ಟ್​ಗಳಿವೆ. ಇವುಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 11 ಸಾವಿರದ 489 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ತ್ವರಿತ ನ್ಯಾಯಾಲಯಗಳಲ್ಲಿ 7 ಸಾವಿರ ಪ್ರಕರಣಗಳು ಬಾಕಿ ಇವೆ ಎಂದು ಅಂಕಿ - ಅಂಶ ನೀಡಿದರು.

ರೈಲುಗಳಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ರೈಲಿನಲ್ಲಿ ಕೃತ್ಯ ನಡೆದಾಗ ಅದನ್ನು ತಡೆಯಬೇಕಾಗಿದ್ದು, ಆರ್‌ಪಿಎಫ್‌ನ ಕೆಲಸ. ಉನ್ನಾವೋ ಮತ್ತು ಹತ್ರಾಸ್ ಪ್ರಕರಣದಲ್ಲಿ ಈ ವಿರೋಧ ಏಕೆ ಬರಲಿಲ್ಲ. ವಿಪಕ್ಷಗಳು ಈ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ದೇಶದ ಪ್ರತಿ ರಾಜ್ಯದಲ್ಲೂ ಇಂತಹ ಘಟನೆಗಳು ನಡೆಯುತ್ತಿವೆ. ದೇಶದಲ್ಲಿ ನಿತ್ಯ 90 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಈ ಪೈಕಿ ಕೇವಲ ಶೇಕಡಾ 2.56 ರಷ್ಟು ಅಪರಾಧಿಗಳಿಗೆ ಮಾತ್ರ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಮಸೂದೆಗೆ ಬಿಜೆಪಿ ಪೂರ್ಣ ಬೆಂಬಲ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ. ವಿಪಕ್ಷ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ಈ ಕಾನೂನು ತಕ್ಷಣವೇ ಜಾರಿಗೆ ಬರಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇದನ್ನು ತಕ್ಷಣಕ್ಕೆ ಅನುಷ್ಠಾನಕ್ಕೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕಾನೂನು ಜಾರಿ ಮಾಡಿದ ಬಳಿಕ ಫಲಿತಾಂಶ ಬರಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ - West Bengal Anti Rape Bill

Last Updated : Sep 3, 2024, 5:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.