ನವದೆಹಲಿ: ಪದವಿ ಪೂರ್ವ ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ನಡೆಸಲಾದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸುವುದರಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರವೇಶ ರದ್ದು ಕೋರಿ ಸಲ್ಲಿಸಲಾದ ಅರ್ಜಿ ವಿರೋಧಿಸಿರುವ ಕೇಂದ್ರ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಅಫಿಟವಿಡ್ ಸಲ್ಲಿಸಿದೆ.
ಮೇ 5 ರಂದು ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಹಿನ್ನೆಲೆ ಪರೀಕ್ಷೆಯನ್ನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್ನಲ್ಲಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು.
ಈ ಕುರಿತು ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ 2024ರ ಪರೀಕ್ಷೆಯನ್ನು ರದ್ದುಗೊಳಿಸುವುದು ಗಂಭೀರ ಅಪಾಯಕ್ಕೆ ಕಾರಣವಾಗುತ್ತದೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ದೇಶದೆಲ್ಲೆಡೆ ನಡೆದ ಪರೀಕ್ಷೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಉಲ್ಲಂಘನೆ ನಡೆದಿಲ್ಲ. ಈಗಾಗಲೇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಇದೀಗ ರದ್ದು ಮಾಡಿದರೆ, ಪ್ರಾಮಾಣಿಕವಾಗಿ ಪರೀಕ್ಷೆಯ ಬರೆದು ಅರ್ಹತೆ ಪಡೆದ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ತಿಳಿಸಲಾಗಿದೆ.
ಈ ಪರೀಕ್ಷೆಯ ಅಕ್ರಮ ಆರೋಪ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದೆ. ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ. ಕೆಲವು ಕ್ರಿಮಿನಲ್ ಅಂಶಗಳ ಮೇರೆಗೆ ಸ್ಪರ್ಧಾತ್ಮಕ ಪರೀಕ್ಷೆ ಗೌಪತ್ಯೆ ಉಲ್ಲಂಘಿಸಲಾಗಿದೆ. ಅವುಗಳನ್ನು ಕಠಿಣ ಕಾನೂನಿನ ಮೂಲಕ ನಿರ್ವಹಣೆ ಮಾಡಬೇಕಿದೆ ಎಂದು ತಿಳಿಸಿತು.
ಪರೀಕ್ಷೆಯ ಪಾವಿತ್ರ್ಯತೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ, ಪರೀಕ್ಷೆಯ ಪಾರದರ್ಶಕತೆ ಮತ್ತು ನ್ಯಾಯ ಸಮ್ಮತತೆ ಮತ್ತು ವಿಶ್ವಾಸಾರ್ಹತೆ ಖಚಿತ ಪಡಿಸಿಕೊಳ್ಳಲು ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ 2024ರನ್ನು ಜಾರಿಗೆ ತಂದಿದೆ. ಇದರ ಆಧಾರದ ಮೇಲೆ ಪರೀಕ್ಷೆಗಳಲ್ಲಿನ ಅನ್ಯಾಯ ವಿಧಾನಗಳಿಗೆ ಸಂಬಂಧಿಸಿದ ಅಪರಾಧಗಳಿಗೆ ಕಟ್ಟು ನಿಟ್ಟಿನ ಶಿಕ್ಷಯನ್ನು ನೀಡಲಾಗುವುದು ಎಂದರು.
ನೀಟ್ ಯುಜಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಹಲವು ಅಭ್ಯರ್ಥಿಗಳು, ಪೋಷಕರು ಹೊಸದಾಗಿ ಪರೀಕ್ಷೆ ನಡೆಸುವಂತೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣ ಕುರಿತು ಜುಲೈ 8 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಇನ್ನು ಕೋಚಿಂಗ್ ಇನ್ಸುಟಿಟ್ಯೂಟ್ಗಳು ಸಲ್ಲಿಸಿದ್ದ ಅರ್ಜಿಯನ್ನು ಕಾಯ್ದಿರಿಸಲಾಗಿದೆ. (ಐಎಎನ್ಎಸ್)
ಇದನ್ನೂ ಓದಿ: ನೀಟ್ ಪೇಪರ್ ಲೀಕ್ ಪ್ರಕರಣ: ಲಾತೂರ್ ಪ್ರವೇಶಿಸಿದ ಸಿಬಿಐ ಅಧಿಕಾರಿಗಳು