ETV Bharat / bharat

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ದಿಗ್ವಿಜಯ್ ಸಿಂಗ್ - ದಿಗ್ವಿಜಯ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ನಿರಾಕರಿಸಿದ್ದಾರೆ.

Lok Sabha election  2024ರ ಲೋಕಸಭೆ ಚುನಾವಣೆ  ಲೋಕಸಭೆ ಚುನಾವಣೆ  ದಿಗ್ವಿಜಯ್ ಸಿಂಗ್  Digvijay Singh
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ದಿಗ್ವಿಜಯ್ ಸಿಂಗ್ ನಿರಾಕರಣೆ
author img

By PTI

Published : Jan 29, 2024, 12:46 PM IST

ರಾಜಗಢ(ಮಧ್ಯಪ್ರದೇಶ): 2024ರ ಲೋಕಸಭೆ ಚುನಾವಣೆಗೆ ಹೆಚ್ಚು ಸಮಯ ಉಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳು ಗೆಲುವಿನ ನಿರೀಕ್ಷೆಯಲ್ಲಿ ಸಿದ್ಧತೆಗಳನ್ನು ಆರಂಭಿಸಿವೆ. ಬಿಹಾರ, ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ತೀವ್ರ ಆಘಾತ ಉಂಟಾಗಿದೆ. ಈ ಮಧ್ಯೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.

ಕಾರಣವೇನು?: ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಖಿಲ್ಚಿಪುರ ನಗರದಲ್ಲಿ ಮಾತನಾಡಿದ ದಿಗ್ವಿಜಯ್ ಸಿಂಗ್, ನಾನು ರಾಜ್ಯಸಭಾ ಸದಸ್ಯ. ರಾಜ್ಯಸಭೆಯ ಅಧಿಕಾರಾವಧಿ ಇನ್ನೂ ಇದೆ. ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜಗಢದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನು ಪಕ್ಷ ನಿರ್ಧರಿಸಲಿದೆ ಎಂದು ತಿಳಿಸಿದರು.

2019ರ ಚುನಾವಣೆಯಲ್ಲಿ ಸೋಲು: ದಿಗ್ವಿಜಯ್ ಸಿಂಗ್ 2019ರ ಚುನಾವಣೆಯಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷಿಸಿದ್ದರು. ಆದರೆ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ದಿಗ್ವಿಜಯ್ ಅವರನ್ನು 3.65 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಈ ಸೋಲು ದಿಗ್ವಿಜಯ್‌ಗೆ ದೊಡ್ಡ ಹಿನ್ನಡೆ ಎಂದೇ ಪರಿಗಣಿಸಲಾಗಿತ್ತು. ಸಿಂಗ್ 1984 ಮತ್ತು 1991ರಲ್ಲಿ ರಾಜ್‌ಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ: ಇನ್ನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. 2019 ಚುನಾವಣೆಯಲ್ಲಿ ಮಧ್ಯಪ್ರದೇಶದ 29 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 28 ಸ್ಥಾನಗಳನ್ನು ಗೆದ್ದಿತ್ತು. 2014ರಲ್ಲೂ ರಾಜ್ಯದಲ್ಲಿ ಬಿಜೆಪಿ 27 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದೆ.

ಇದನ್ನೂ ಓದಿ: ಎರಡು ದಿನಗಳ ಬಳಿಕ ಪಶ್ಚಿಮ ಬಂಗಾಳದಿಂದ ರಾಹುಲ್​ 'ನ್ಯಾಯ ಯಾತ್ರೆ' ಪುನಾರಂಭ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.