ನವದೆಹಲಿ: ಸಿಬ್ಬಂದಿ ಕೊರತೆಯಿಂದ ಏರ್ ಇಂಡಿಯಾ ಇಂದು 70 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದೆ. ಕ್ಯಾಬಿನ್ ಸಿಬ್ಬಂದಿ ಸೇವೆಗೆ ಲಭ್ಯವಾಗದ ಕಾರಣ ಕೆಲವು ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.
ನಮ್ಮ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗದ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದರ ಪರಿಣಾಮವಾಗಿ ವಿಮಾನಗಳು ವಿಳಂಬವಾಗಿವೆ ಮತ್ತು ರದ್ದುಗೊಂಡಿದೆ. ಈ ಘಟನೆಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ನಾವು ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಮ್ಮ ಪ್ರಯಾಣಿಕರಿಗೆ ಯಾವುದೇ ಅನಾನುಕೂಲವಾಗದಂತೆ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಕ್ಷಮೆಯಾಚಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್: ಏರ್ ಇಂಡಿಯಾ ವಕ್ತಾರರು ಮಾತನಾಡಿ, "ನಮ್ಮಿಂದಾದ ಅಡಚಣೆಗಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈ ಪರಿಸ್ಥಿತಿ ನಾವು ಒದಗಿಸಲು ಪ್ರಯತ್ನಿಸುತ್ತಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ. ವಿಮಾನಗಳ ರದ್ದತಿಯಿಂದ ತೊಂದರೆಗೊಳಗಾಗಿರುವ ಅತಿಥಿಗಳಿಗೆ ಮರುಪಾವತಿ ಅಥವಾ ಇನ್ನೊಂದು ದಿನಾಂಕಕ್ಕೆ ಪೂರಕ ಮರುಹೊಂದಿಕೆ ಮೂಲಕ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು'' ಎಂದು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ತೀರ್ಪು ರದ್ದುಗೊಳಿಸಲಿದೆ: ಮೋದಿ - Modi Campaign In Maharashtra