ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವ ಹಾಗೂ ಪರಿಸರ ರಕ್ಷಣೆ ಮತ್ತು ಚಾರ್ಜಿಂಗ್ ಮೂಲ ಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಈ ಸಂಬಂದ 2024-25 ನೇ ಸಾಲಿನ ಮಧ್ಯಂತರ ಬಜೆಟ್ನಲ್ಲಿ ಇ- ವಾಹನ ಪರಿಸರ ವ್ಯವಸ್ಥೆ ವಿಸ್ತರಣೆ ಮಾಡುವುದಾಗಿ ಘೋಷಿಸಿದೆ.
ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಚಾರ್ಜಿಂಗ್ ಮೂಲಸೌಕರ್ಯವನ್ನು ಬೆಂಬಲಿಸುವ ಮೂಲಕ ಇ-ವಾಹನ ಪರಿಸರ ವ್ಯವಸ್ಥೆಯನ್ನು ವಿಸ್ತರಣೆ ಮತ್ತು ಬಲಪಡಿಸುವುದಾಗಿ ಹೇಳಿದೆ. ಪಾವತಿ ಭದ್ರತಾ ಕಾರ್ಯವಿಧಾನದ ಮೂಲಕ ಸಾರ್ವಜನಿಕ ಸಾರಿಗೆ ಜಾಲಗಳಿಗೆ ಇ-ಬಸ್‌ಗಳನ್ನು ಹೆಚ್ಚಾಗಿ ಬಳಸುವಂತೆ ಉತ್ತೇಜನ ನೀಡುವುದಾಗಿ ಘೋಷಿಸಿದೆ. ಈ ಮೂಲಕ ಪೆಟ್ರೋಲಿಯಂ ಉತ್ಪನ್ನಗಳ ಬಳಕೆ ಕಡಿಮೆ ಮಾಡಲು ಹಾಗೂ ಭವಿಷ್ಯದಲ್ಲಿ ಅದರ ಕೊರತೆಯನ್ನು ನೀಗಿಸಲು ಸರ್ಕಾರ ಈಗಿನಿಂದಲೇ ಕ್ರಮ ಕೈಗೊಳ್ಳಲು ಮುಂದಾಗಿದೆ.
ಜೈವಿಕ ಉತ್ಪಾದನೆ: ಇದರ ಜೊತೆಗೆ ಗ್ರೀನ್ ಎನರ್ಜಿಗೆ ಉತ್ತೇಜನ ನೀಡಲು ತೀರ್ಮಾನಿಸಿದ್ದು, ಇದಕ್ಕಾಗಿ ಬಜೆಟ್ನಲ್ಲಿ ಹೊಸ ಯೋಜನೆಯನ್ನೂ ಪ್ರಕಟಿಸಿದೆ. ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡರಿ ಪ್ರಾರಂಭಿಸುವುದಾಗಿ ನಿರ್ಮಲಾ ಸೀತಾರಾಮನ್ ತಮ್ಮ ಇಂಟ್ರಿಮ್ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಜೈವಿಕ ವಿಘಟನೀಯ ಪಾಲಿಮರ್‌ಗಳು, ಜೈವಿಕ ಪ್ಲಾಸ್ಟಿಕ್, ಜೈವಿಕ ಔಷಧಗಳು ಮತ್ತು ಜೈವಿಕ ಕೃಷಿಯಂಥ ಪರಿಸರ ಸ್ನೇಹಿ ಪರ್ಯಾಯಗಳನ್ನು ಕಂಡುಕೊಳ್ಳಲು ಈ ಯೋಜನೆ ಸಹಾಯಕವಾಗಲಿದೆ.
ಇದನ್ನು ಓದಿ: ರೈಲ್ವೆಯಲ್ಲಿ ಭಾರಿ ಬದಲಾವಣೆಗೆ ಬಜೆಟ್ನಲ್ಲಿ ಮುನ್ನುಡಿ: ಮೂರು ರೈಲ್ವೆ ಕಾರಿಡಾರ್ಗಳ ಘೋಷಣೆ