ETV Bharat / business

ದೊಡ್ಡಬಳ್ಳಾಪುರ; ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಆರಂಭ - Green Hydrogen - GREEN HYDROGEN

ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಕಾರ್ಖಾನೆಯು ದೊಡ್ಡಬಳ್ಳಾಪುರದಲ್ಲಿ ಆರಂಭವಾಗಿದೆ.

factory
ಕಾರ್ಖಾನೆ (ETV Bharat)
author img

By ETV Bharat Karnataka Team

Published : Jul 19, 2024, 10:35 PM IST

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಅಮೆರಿಕ ಮೂಲದ ಓಹ್ಮಿಯಮ್‌ ಸಂಸ್ಥೆಯು ರಾಜ್ಯದಲ್ಲಿ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಆರಂಭಿಸಿದೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್​ನಲ್ಲಿ ಕಾರ್ಖಾನೆ ಪ್ರಾರಂಭವಾಗಿದ್ದು, ಶುಕ್ರವಾರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಉದ್ಘಾಟನೆ ಮಾಡಿದರು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ನೂತನ ಘಟಕ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ''ಕರ್ನಾಟಕದಲ್ಲಿ ಪರಿಸರ ಸ್ನೇಹಿ ಕಂಪನಿ ಆರಂಭಗೊಂಡಿರುವುದು ಸಂತಸವಾಗಿದೆ. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ 18,000 ಕೋಟಿ ರೂ. ಹಣ ಮೀಸಲಿಟ್ಟಿದೆ. ಸೋಲಾರ್ ಉತ್ಪಾದನಾ ದೇಶಗಳ ಸಾರಥ್ಯವನ್ನ ಭಾರತ ವಹಿಸಿಕೊಂಡಿದೆ. ಮುಂದಿನ ಪೀಳಿಗೆಗಾಗಿ ಪ್ರಕೃತಿಯನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ'' ಎಂದರು.

''ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ, ನಾವು ರಾಷ್ಟ್ರದ ಹಸಿರು ಶಕ್ತಿ ಗುರಿಗಳನ್ನು ಸಾಧಿಸಲು ಕೆಲಸ ಮಾಡುತ್ತಿದ್ದೇವೆ. ಕಳೆದ 10 ವರ್ಷಗಳಲ್ಲಿ ನವೀಕರಿಸಬಹುದಾದ ಶಕ್ತಿಯ ಸಾಮರ್ಥ್ಯವು ಹೆಚ್ಚಿದೆ. 2014ರಲ್ಲಿ 76 ಗಿಗಾವ್ಯಾಟ್ ನಿಂದ ಜೂನ್ 2024ರ ವೇಳೆಗೆ 195 ಗಿಗಾವ್ಯಾಟ್​​ವರೆಗೆ ಅಂದರೆ 2.5 ಪಟ್ಟು ಹೆಚ್ಚಾಗಿದೆ. ಸೌರ ಶಕ್ತಿ ಸಾಮರ್ಥ್ಯವು 2014ರಲ್ಲಿ 3 ಗಿಗಾವ್ಯಾಟ್​​​ನಿಂದ 30 ಪಟ್ಟು ಜಿಗಿತ ಕಂಡಿದೆ. ಈಗ, ಪವನ ಶಕ್ತಿ ಸಾಮರ್ಥ್ಯವು 21 ಗಿಗಾವ್ಯಾಟ್​​ನಿಂದ 46 ಗಿಗಾವ್ಯಾಟ್​ಗೆ ಏರಿದೆ. ಪರಿಸರಸ್ನೇಹಿ ಕೈಗಾರಿಕೆಗಳು ಮತ್ತು ಸ್ಥಾವರಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ'' ಎಂದು ತಿಳಿಸಿದರು.

ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ''ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ. ಓಹ್ಮಿಯಮ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡೋಜನ್ ಉತ್ಪಾದನೆ ಅಗಲಿದ್ದು, ಹಂತ - ಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು'' ಎಂದು ಹೇಳಿದರು.

''ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ. ನೀರಿನಿಂದ ತಯಾರಾಗುವ ಗ್ರೀನ್-ಹೈಡೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥೆನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಉಪಯೋಗಿಸಬಹುದು. 2030ರ ವೇಳೆಗೆ ಗ್ರೀನ್ ಹೈಡ್ರೋಜನ್ ಬಳಕೆ ಹೆಚ್ಚಾಗುವ ನಿರೀಕ್ಷೆ ಇದೆ. ಈ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಹೆಜ್ಜೆ ಇಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಇಂತಹ ಸಾಮಾಜಿಕ ಜವಾಬ್ದಾರಿ ಕಂಪನಿಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ'' ಎಂದು ಭರವಸೆ ನೀಡಿದರು.

ಈ ವೇಳೆ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿಡಿ ರಾಜೇಗೌಡ, ಶಾಸಕ ಧೀರಜ್ ಮುನಿರಾಜು, ಸಿಇಒ ಆರ್ನೆ ಬ್ಯಾಲೆಂಟೆನ್, ಸಿಒಒ ಅಶ್ವಿನ್ ವರ್ಮಾ, ಮಾನವ ಸಂಪನ್ಮೂಲ ಅಧಿಕಾರಿ ಕೃಷ್ಣಕುಮಾರ್ ಇದ್ದರು.

ಇದನ್ನೂ ಓದಿ: ಅಧಿವೇಶನಕ್ಕೆ ಶಾಸಕರ ಹಾಜರಾತಿ ಹೆಚ್ಚಿಸಲು ಹೊಸ ಹೊಸ ಪ್ರಯೋಗ: ಉಚಿತ ಉಪಹಾರ, ಭೋಜನ ಆಯ್ತು, ಈಗ ಕಿರು ನಿದ್ದೆಗೂ ವಿಶೇಷ ಖುರ್ಚಿ! - SPL CHAIR ARRANGEMENT TO MLAS

ETV Bharat Logo

Copyright © 2024 Ushodaya Enterprises Pvt. Ltd., All Rights Reserved.