ETV Bharat / business

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯಿಲ್ಲ: ಕೇಂದ್ರ ಸರ್ಕಾರ - Interest rates - INTEREST RATES

ಪಿಪಿಎಫ್, ಹಿರಿಯ ನಾಗರಿಕರ ಉಳಿತಾಯ ಯೋಜನೆ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಬದಲಾಯಿಸದೆ ಮುಂದುವರಿಸಲಾಗಿದೆ.

Interest rates on small savings schemes including PPF continue unchanged

author img

By ETV Bharat Karnataka Team

Published : Mar 31, 2024, 6:01 PM IST

ನವದೆಹಲಿ: ಏಪ್ರಿಲ್ 1, 2024 ರಿಂದ ಪ್ರಾರಂಭವಾಗುವ ಹೊಸ ತ್ರೈಮಾಸಿಕದಲ್ಲಿ ಅಂಚೆ ಕಚೇರಿ ಉಳಿತಾಯ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಳು (ಎಸ್​ಸಿಎಸ್ಎಸ್) ಮತ್ತು ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಬಡ್ಡಿದರಗಳಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ. ಕೇಂದ್ರ ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಪರಿಷ್ಕರಿಸುತ್ತದೆ. ಆದರೆ 2025ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾಗಿರುವ ಏಪ್ರಿಲ್-ಜೂನ್ 2024 ರ ತ್ರೈಮಾಸಿಕದಲ್ಲಿ ಹಿಂದಿನ ಜನವರಿ-ಮಾರ್ಚ್ 2024ರ ತ್ರೈಮಾಸಿಕದಲ್ಲಿ ಚಾಲ್ತಿಯಲ್ಲಿದ್ದ ದರಗಳನ್ನೇ ಮುಂದುವರಿಸಲಾಗಿದೆ.

"2024-25ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 2024 ರ ಏಪ್ರಿಲ್ 1 ರಿಂದ ಪ್ರಾರಂಭವಾಗಿ 2024 ರ ಜೂನ್ 30 ಕ್ಕೆ ಕೊನೆಗೊಳ್ಳುವ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ (2024 ರ ಜನವರಿ 1 ರಿಂದ 2024 ರ ಮಾರ್ಚ್ 31 ರವರೆಗೆ) ಇದ್ದಂತೆಯೇ ಮುಂದುವರಿಯಲಿವೆ" ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್​ವೈ), ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ, ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್​ಸಿಎಸ್ಎಸ್) ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್​ಸಿ) ಕೆಲವು ಜನಪ್ರಿಯ ಸಣ್ಣ ಉಳಿತಾಯ ಯೋಜನೆಗಳಾಗಿವೆ.

ಪೋಸ್ಟ್ ಆಫೀಸ್ ಉಳಿತಾಯ ಖಾತೆಯಲ್ಲಿನ ಬಡ್ಡಿದರವನ್ನು ವಾರ್ಷಿಕವಾಗಿ ಶೇಕಡಾ 4 ರಷ್ಟು ಮತ್ತು ಪಿಪಿಎಫ್​ಗೆ ಶೇಕಡಾ 7.1ರಷ್ಟು ಇರಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿದರ ಶೇಕಡಾ 8.3ರಷ್ಟು (ತ್ರೈಮಾಸಿಕವಾಗಿ ಪಾವತಿಸಲಾಗುತ್ತದೆ), ಸುಕನ್ಯಾ ಸಮೃದ್ಧಿ ಖಾತೆಗೆ ಶೇಕಡಾ 8.2 ರಷ್ಟು ಇರಲಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿ ಶೇಕಡಾ 7.7 ರಷ್ಟಿದೆ. ಕಿಸಾನ್ ವಿಕಾಸ್ ಪತ್ರ ಯೋಜನೆಯ ಬಡ್ಡಿದರವನ್ನು ಶೇಕಡಾ 7.5 ಕ್ಕೆ ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರಕ್ಕೆ ಶೇಕಡಾ 7.5 ಕ್ಕೆ ನಿಗದಿಪಡಿಸಲಾಗಿದೆ.

ಡಿಸೆಂಬರ್ 31, 2023 ಕ್ಕೆ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ಕೆಲ ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಕೊನೆಯ ಬಾರಿಗೆ ಕೇಂದ್ರ ಸರ್ಕಾರ ಹೆಚ್ಚಿಸಿತ್ತು. ಮರುಕಳಿಸುವ ಠೇವಣಿ ದರವನ್ನು ಹೊರತುಪಡಿಸಿ ಎಲ್ಲಾ ಯೋಜನೆಗಳ ಬಡ್ಡಿದರಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಬಡ್ಡಿದರ ಶೇಕಡಾ 7.1 ರಷ್ಟಿದೆ.

ಇದನ್ನೂ ಓದಿ : ಏ.1ರಿಂದ ಗೋಧಿ ದಾಸ್ತಾನು ಬಹಿರಂಗಪಡಿಸುವಂತೆ ಮಾರಾಟಗಾರರಿಗೆ ಕೇಂದ್ರದ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.