ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಖಾಲಿ ಇರುವ ಕ್ಲರಿಕಲ್ ಮಟ್ಟದ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 13,735 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆ ಕುರಿತ ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆ ವಿವರ: 13,735 ಗ್ರಾಹಕ ಬೆಂಬಲ ಮತ್ತು ಮಾರಾಟದಲ್ಲಿ ಕಿರಿಯ ಸಹಾಯಕರ ಹುದ್ದೆಗಳು. ಇದರಲ್ಲಿ ಕರ್ನಾಟಕಕ್ಕೆ 50 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿ ಮೀರಿಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮ್ಸ್, ಮೇನ್ಸ್ ಮತ್ತು ಭಾಷಾ ಪರಿಣಿತಿ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.
ಈ ಹುದ್ದೆಗೆ ಡಿಸೆಂಬರ್ 17ರಿಂದ ಅರ್ಜಿ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಜನವರಿ 7 ಆಗಿದೆ. ಈ ಹುದ್ದೆಗಳಿಗೆ 2025ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಮುಖ್ಯ ಪರೀಕ್ಷೆ 2025ರ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ನಡೆಯುವ ಸಾಧ್ಯತೆ ಇದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sbi.co.in ಭೇಟಿ ನೀಡಿ.
ಇದನ್ನೂ ಓದಿ: UPSC ನೇಮಕಾತಿ: ಎನ್ಡಿಎ, ಎನ್ಎ ಪರೀಕ್ಷೆಗೆ ಅರ್ಜಿ ಆಹ್ವಾನ