ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ದಿಂದ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2006 ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕಟಿಸಲಾಗಿದೆ. ಗ್ರೂಪ್ ಸಿ ಮತ್ತು ಡಿ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ 18 , ಗರಿಷ್ಠ 30 ವರ್ಷ ಗ್ರೇಡ್ ಡಿ ಹುದ್ದೆಗೆ ಕನಿಷ್ಠ 18ರಿಂದ ಗರಿಷ್ಠ 27 ವರ್ಷ ಆಗಿದೆ. ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಒನ್ ಟೈಮ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಬಳಿಕ, ಅಭ್ಯರ್ಥಿಗಳು ಶೈಕ್ಷಣಿಕ ಮಾಹಿತಿ ಸೇರಿದಂತೆ ಇನ್ನಿತರ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಪ.ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 26ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 17 ಆಗಿದೆ. ಈ ಹುದ್ದೆಗಳ ಆನ್ಲೈನ್ ಪರೀಕ್ಷೆ ಅಕ್ಟೋಬರ್- ನವೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯ ಪರೀಕ್ಷಾ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬಹುದಾಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರು ನಗರ ಗ್ರಾಮ ಪಂಚಾಯತ್ನಲ್ಲಿ ನೇಮಕಾತಿ; ಇಲ್ಲಿದೆ ಹುದ್ದೆ ವಿವರ