ETV Bharat / education-and-career

ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳು: SSLC ಪಾಸ್ ಆಗಿದ್ರೆ ಮತ್ತೇಕೆ ತಡ? - Haveri District Court Jobs - HAVERI DISTRICT COURT JOBS

ಈ ಹುದ್ದೆಗೆ ಜುಲೈ 7ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್​ 1 ಕಡೇಯ ದಿನವಾಗಿದೆ.

26 Peon job Recruitment by Haveri District Court
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jul 5, 2024, 12:58 PM IST

ಬೆಂಗಳೂರು: ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 26 ಹುದ್ದೆಗಳಿವೆ. ಇವುಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಎಸ್​ಎಸ್​ಎಲ್​ಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ವೇತನ: 17,000-29,950 ರೂ

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

26 Peon job Recruitment by Haveri District Court
ಅಧಿಸೂಚನೆ (ಹಾವೇರಿ ಜಿಲ್ಲಾ ನ್ಯಾಯಾಲಯ)

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಸಲ್ಲಿಸಬಹುದು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕವಿದೆ.

ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ haveri.dcourts.gov.in ಭೇಟಿ ನೀಡಿ.

ಉತ್ತರ ಕನ್ನಡದಲ್ಲಿ ಉದ್ಯೋಗಾವಕಾಶ: ಕಾರವಾರ ನ್ಯಾಯಾಲಯದಲ್ಲಿ ಟೈಪಿಸ್ಟ್​​, ಟೈಪಿಸ್ಟ್​- ಕಾಪಿಸ್ಟ್​​-ಪೊಸೆಸ್​ ಸರ್ವರ್​ ಸೇರಿದಂತೆ ಒಟ್ಟು 26 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪ್ರೊಸೆಸ್​​ ಸರ್ವರ್​​ ಹುದ್ದೆಗೆ ಎಸ್​ಎಸ್​ಎಲ್​ಸಿ, ಉಳಿದ ಅಭ್ಯರ್ಥಿಗಳು ಪಿಯುಸಿ ಜೊತೆಗೆ ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿಯ ಹಿರಿಯ ಶ್ರೇಣಿಯ ಟೈಪಿಂಗ್​ನಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಜೂನ್​ 20ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 19.

ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ: ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್​ ಸೇರಿದಂತೆ 26 ಹುದ್ದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.