ETV Bharat / education-and-career

ಉತ್ತರ ಕನ್ನಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ - Uttara Kannada WCD Recruitment - UTTARA KANNADA WCD RECRUITMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

344 Anganwadi Worker and Helper job Notification By Uttara Kannada WCD
ಉತ್ತರ ಕನ್ನಡ ಅಂಗನಾವಾಡಿ ಹುದ್ದೆ (ಈಟಿವಿ ಭಾರತ್​​)
author img

By ETV Bharat Karnataka Team

Published : Jul 15, 2024, 4:17 PM IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 344 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ವಿವರ: 81 ಅಂಗನವಾಡಿ ಕಾರ್ಯಕರ್ತರು ಮತ್ತು 263 ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆ ಎಂಬ ಮಾಹಿತಿ ಇಲ್ಲಿದೆ.

ತಾಲೂಕು ಅಂಗನಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕರು
ಅಂಕೋಲಾ 3 17
ಭಟ್ಕಳ 7 15
ಹಳಿಯಾಳ 12 20
ದಾಂಡೇಲಿ 412
ಹೊನ್ನಾವಾರ 4 29
ಜೋಯಿಡಾ 28
ಕಾರವಾರ 26
ಕುಮಟಾ 330
ಮುಂಡಗೋಡ 1029
ಸಿದ್ದಾಪುರ 717
ಶಿರಸಿ 2455
ಯಲ್ಲಾಪುರ 515

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.

ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್​ಲೈನ್​ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಆಗಸ್ಟ್​ 12ರೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳು ಈ ಜಾಲತಾಣದ http://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇದನ್ನೂ ಓದಿ: 20 ಸಾವಿರ ಅಂಗನವಾಡಿಗಳು 'ಗವರ್ನಮೆಂಟ್ ಮಾಂಟೆಸ್ಸರಿ' ಆಗಿ ಪರಿವರ್ತನೆ: ಲಕ್ಷ್ಮೀ ಹೆಬ್ಬಾಳ್ಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.