ETV Bharat / education-and-career

ಪಶ್ಚಿಮ ರೈಲ್ವೆಯಲ್ಲಿದೆ 5066 ಅಪ್ರೆಂಟಿಸ್​ ಹುದ್ದೆ; ನಿಮ್ಮದು ಐಟಿಐ ಆಗಿದೆಯೇ? ಹಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ - apprentice recruitment - APPRENTICE RECRUITMENT

ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಅಕ್ಟೋಬರ್​ 22 ಆಗಿದೆ.

5066 apprentice recruitment by Western Railway
ಉದ್ಯೋಗ ಮಾಹಿತಿ (ಈಟಿವಿ ಭಾರತ್​)
author img

By ETV Bharat Karnataka Team

Published : Sep 21, 2024, 3:22 PM IST

ಬೆಂಗಳೂರು: ಪಶ್ಚಿಮ ರೈಲ್ವೆಯಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 5066ರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷ ಅವಧಿಯ ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

ಹುದ್ದೆ ವಿವರ: ಫಿಟ್ಟರ್​, ವೆಲ್ಡರ್​, ಟರ್ನರ್​, ಮೆಷಿನಿಸ್ಟ್​, ಕಾರ್ಪೆಂಟರ್​, ಪೈಂಟರ್​, ಎಲೆಕ್ಟ್ರಿಷಿಯನ್​ ಸೇರಿದಂತೆ ಹಲವು ಹುದ್ದೆಗಳ ಭರ್ತಿ ನಡೆಸಲಾಗುವುದು.

5066 apprentice recruitment by Western Railway
ಅಧಿಸೂಚನೆ (ಪಶ್ಚಿಮ ರೈಲ್ವೆ)

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಬಳಿಕ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ ಮತ್ತು ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರ ವಿದ್ಯಾರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಮೇಲೆ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಅಕ್ಟೋಬರ್​ 22 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ wr.indianrailways.gov.in ಭೇಟಿ ನೀಡಿ.

ಎಚ್​ಎಎಲ್​ನಲ್ಲಿ ಅಪ್ರೆಂಟಿಸ್​ ಹುದ್ದೆ: ಹಿಂದೂಸ್ತಾನ್​ ಏರೋನಾಟಿಕ್ಸ್ ಲಿಮಿಟೆಡ್ (ಎಚ್​ಎಎಲ್​)ನಲ್ಲಿ ಟ್ರೇಡ್​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಮೇಲೆ 12 ತಿಂಗಳ ಅವಧಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಕೇವಲ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಎನ್​ಸಿವಿಟಿ ಪೋರ್ಟಲ್​ನಲ್ಲಿ ನೋಂದಣಿ ಮಾಡಿದ ಬಳಿಕ ಅಧಿಸೂಚನೆಯಲ್ಲಿ ನೀಡಲಾದ ನಿಗದಿತ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ. ಟೆಕ್ನಿಕಲ್​ ಟ್ರೈನಿಂಗ್​ ಇನ್ಸಿಟಿಟ್ಯೂಟ್​​, ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​, ಸುರಂಜನ್​ ದಾಸ್​ ರಸ್ತೆ, ವಿಮಾನಪುರ ಪೋಸ್ಟ್​, ಬೆಂಗಳೂರು -560017. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್​ 19. ಹೆಚ್ಚಿನ ಮಾಹಿತಿಗೆ hal-india.co.in ಭೇಟಿ ನೀಡಿ.

ಇದನ್ನೂ ಓದಿ: ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.