ಬೆಂಗಳೂರು: ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಬಿವಿಎಸ್ಸಿ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
![AHVS recuritment for Veterinary Officer for Contract basis](https://etvbharatimages.akamaized.net/etvbharat/prod-images/11-06-2024/vetarnary_1106newsroom_1718085312_404.jpg)
ವಿದ್ಯಾರ್ಹತೆ: ಅಭ್ಯರ್ಥಿಗಳು ಕಾನೂನಿಂದ ಸ್ಥಾಪಿತವಾದ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿವಿಎಸ್ಸಿ, ಬಿವಿಎಸ್ಸಿ ಅಂಡ್ ಎಹೆಚ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಠ ಅಭ್ಯರ್ಥಿ 35 ವರ್ಷ ಭರ್ತಿಯಾಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಜೂನ್ 14ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್ 24 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ahvs.karnataka.gov.in ಭೇಟಿ ನೀಡಿ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಹುದ್ದೆ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸ್ 14, ಕಿರಿಯ ಪ್ರಯೋಗಾಲಯ ತಂತ್ರಜ್ಞರು 4, ಫಾರ್ಮಾಸಿಸ್ಟ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನರ್ಸ್ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್, ಕಿರಿಯ ಪ್ರಯೋಗಾಲಯ ತಂತ್ರಜ್ಞ ಹುದ್ದೆಗೆ ಡಿಪ್ಲೊಮಾ, ಲ್ಯಾಬ್ ಟೆಕ್ನಿಷಿಯನ್ನಲ್ಲಿ ಬಿಎಸ್ಸಿ, ಫಾರ್ಮಾಸಿಸ್ಟ್ ಹುದ್ದೆಗೆ ಡಿ ಫಾರ್ಮ್, ಬಿಫಾರ್ಮ್ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 45 ವರ್ಷವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ವಿಳಾಸ: ಜಿಲ್ಲಾ ಆಸ್ಪತ್ರೆ ಕಚೇರಿ, ಚಿತ್ರದುರ್ಗ.
ಈ ಹುದ್ದೆಗೆ ಜೂನ್ 5 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್ 21 ಆಗಿದೆ. ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ chitradurga.nic.in ಭೇಟಿ ನೀಡಿ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್ಶಿಪ್ ಹುದ್ದೆಗೆ ಮರು ಅಧಿಸೂಚನೆ