ಬೆಂಗಳೂರು: ಚಿತ್ರದುರ್ಗದಲ್ಲಿ 215 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಅಂಗನವಾಡಿಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹುದ್ದೆ ವಿವರ:
ಅಂಗನವಾಡಿ ಕಾರ್ಯಕರ್ತರು - 63
ಮಿನಿ ಅಂಗನವಾಡಿ ಕಾರ್ಯಕರ್ತರು - 3
ಅಂಗನವಾಡಿ ಸಹಾಯಕರು - 149
ತಾಲೂಕಿನಲ್ಲಿರುವ ಹುದ್ದೆ ವಿವರ
ತಾಲೂಕು | ಅಂಗನವಾಡಿ ಕಾರ್ಯಕರ್ತರು | ಸಹಾಯಕರು | ಮಿನಿ ಅಂ.ಕಾರ್ಯಕರ್ತರು |
ಭರಮಸಾಗರ | 8 | 21 | |
ಚಿತ್ರದುರ್ಗ | 3 | 12 | |
ಚಳ್ಳಕೆರೆ | 16 | 30 | |
ಹಿರಿಯೂರು | 4 | 35 | 1 |
ಹೊಳಲ್ಕೆರೆ | 9 | 14 | 1 |
ಹೊಸದುರ್ಗ | 18 | 23 | 1 |
ಮೊಳಕಾಲ್ಮೂರು | 5 | 14 |
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ, ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್ 31 ಆಗಿದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.
ಶಿವಮೊಗ್ಗದಲ್ಲೂ ಇವೆ ಅಂಗನವಾಡಿ ಉದ್ಯೋಗ; ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35, ಸಾಗರ- ಕಾರ್ಯಕರ್ತೆಯರು-21, ಸಹಾಯಕಿಯರು-62, ಶಿಕಾರಿಪುರ- ಕಾರ್ಯಕರ್ತೆಯರು-08, ಸಹಾಯಕಿಯರು-55, ಸೊರಬ- ಕಾರ್ಯಕರ್ತೆಯರು-38, ಸಹಾಯಕಿಯರು-65, ತೀರ್ಥಹಳ್ಳಿ- ಕಾರ್ಯಕರ್ತೆಯರು-09, ಸಹಾಯಕಿಯರು-41 ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 29 ಕಡೇಯ ದಿನವಾಗಿದ್ದು, ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ.
ಇದನ್ನೂ ಓದಿ: ಉಡುಪಿ: ಕಿರಿಯ ಆರೋಗ್ಯ ಸಹಾಯಕರ ನೇಮಕಾತಿಗೆ ಅಧಿಸೂಚನೆ