ಬೆಂಗಳೂರು: ಬಾಗಲಕೋಟೆ, ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗಳ ಭರ್ತಿಗೆ ನೇಮಕಾತಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಜನವರಿ 5ರ ವರೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:
ಬಾಗಕೋಟೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು: 577
- ಅಂಗನವಾಡಿ ಕಾರ್ಯಕರ್ತರು- 106
- ಅಂಗನವಾಡಿ ಸಹಾಯಕರು - 471
ಕಲಬುರಗಿ ಜಿಲ್ಲೆಯಲ್ಲಿರುವ ಒಟ್ಟು ಹುದ್ದೆಗಳು: 299
- ಅಂಗನವಾಡಿ ಕಾರ್ಯಕರ್ತರು - 61
- ಅಂಗನವಾಡಿ ಸಹಾಯಕರು- 238
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಒಟ್ಟು ಹುದ್ದೆಗಳು: 267
- ಅಂಗನವಾಡಿ ಕಾರ್ಯಕರ್ತರು- 50
- ಅಂಗನವಾಡಿ ಸಹಾಯಕಿಯರು -217
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗೂ ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಮುಗಿಸಿರಬೇಕು.
ವಯೋಮಿತಿ: 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು karnemakaone.kar.nic.in/abcd/ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
ಇದನ್ನೂ ಓದಿ: 120 ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ