ಬೆಂಗಳೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಬೆಳಗಾವಿ ತುಮಕೂರು ಹಾಗೂ ಬೀದರ್ನಲ್ಲಿ ನೇಮಕಾತಿ ನಡೆಯಲಿದೆ. ಹಾವೇರಿಯಲ್ಲಿ 152 ಹುದ್ದೆಗಳು ಖಾಲಿ ಇದ್ದು, ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಗಳ ವಿವರ: ಹಾವೇರಿ ಜಿಲ್ಲೆಯಲ್ಲಿ ಒಟ್ಟು 152 ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ,
- ಅಂಗನವಾಡಿ ಕಾರ್ಯಕರ್ತರು- 39
- ಅಂಗನವಾಡಿ ಸಹಾಯಕರು- 113
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು.
- ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ: ಮೆರಿಟ್, ಸಂದರ್ಶನದ ಮೂಲಕ ಆಯ್ಕೆ.
ಜನವರಿ 16ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 15 ಕಡೇಯ ದಿನ.
ಬೀದರ್‌ನಲ್ಲೂ ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 31 ಅಂಗನವಾಡಿ ಕಾರ್ಯಕರ್ತರು ಮತ್ತು 65 ಅಂಗನವಾಡಿ ಸಹಾಯಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಜನವರಿ 10ರಿಂದ ಫೆಬ್ರವರಿ 5ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮಾಂತರ ಪ್ರದೇಶ ಮತ್ತು ನಗರ ಪ್ರದೇಶದಲ್ಲಿ ವಾಸ್ತವ್ಯ ಹೊಂದಿದ್ದು, ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಬೇಕು. ಕನ್ನಡ ಓದುವ, ಬರೆಯುವ ಜ್ಞಾನ ಇರಬೇಕು.
ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ