ETV Bharat / education-and-career

ವಿಜಯಪುರ: ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ - WOMEN AND CHILD DEVELOPMENT

ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ, ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

Anganwadi workers and helpers recruitment by Vijayapura WCD
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Oct 14, 2024, 4:41 PM IST

ಬೆಂಗಳೂರು: ವಿಜಯಪುರದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 1,170 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಒಟ್ಟು 1,170 ಹುದ್ದೆಗಳು. ಈ ಪೈಕಿ ಅಂಗನವಾಡಿ ಕಾರ್ಯಕರ್ತರ ಹುದ್ದೆ- 313, ಅಂಗನವಾಡಿ ಸಹಾಯಕರ ಹುದ್ದೆ- 857.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಮುಗಿಸಿರಬೇಕು.

ವಯೋಮಿತಿ: 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್‌ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್​ 10ರಿಂದ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್​ 9 ಆಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.

ಚಿಕ್ಕಬಳ್ಳಾಪುರ- ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಲು ಅ.19 ಕಡೇಯ ದಿನಾಂಕ: ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 6ನೇ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 285 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್​ 19 ಕಡೇಯ ದಿನ. ಅಂಗನವಾಡಿ ಕಾರ್ಯಕರ್ತರು - 54, ಮಿನಿ ಅಂಗನವಾಡಿ ಕಾರ್ಯಕರ್ತೆಯರು - 14, ಅಂಗನವಾಡಿ ಸಹಾಯಕಿಯರು - 217 ಹುದ್ದೆಗಳಿವೆ. ಹೆಚ್ಚಿನ ಮಾಹಿತಿಗೆ http://karnemakaone.kar.nic.in/abcd/ ಅಥವಾ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಸ್ಟೇಷನ್​ ಮಾಸ್ಟರ್​​, ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನೂ ಇದೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.