ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಬುರ್ಗಿ, ಉತ್ತರ ಕನ್ನಡ, ಚಿತ್ರದುರ್ಗ, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿನ ತಾಲೂಕುಗಳಲ್ಲಿ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.
ಹುದ್ದೆಗಳ ವಿವರ:
ಉತ್ತರ ಕನ್ನಡ
ಅಂಗನವಾಡಿ ಕಾರ್ಯಕರ್ತರು - 81
ಅಂಗನವಾಡಿ ಸಹಾಯಕಿರು - 263
ಅರ್ಜಿ ಸಲ್ಲಿಸಲು ಅಂತಿಮ ದಿನ- ಆಗಸ್ಟ್ 12
ಕಲಬುರಗಿ:
ಅಂಗನವಾಡಿ ಕಾರ್ಯಕರ್ತರು - 61
ಅಂಗನವಾಡಿ ಸಹಾಯಕಿಯರು - 238
ಅರ್ಜಿ ಸಲ್ಲಿಕೆಸಲು ಅಂತಿಮ ದಿನ - ಆಗಸ್ಟ್ 7
ಚಿತ್ರದುರ್ಗ:
ಅಂಗನವಾಡಿ ಕಾರ್ಯಕರ್ತರು - 63
ಮಿನಿ ಅಂಗನವಾಡಿ ಕಾರ್ಯಕರ್ತರು - 3
ಅಂಗನವಾಡಿ ಸಹಾಯಕರು - 149
ಅರ್ಜಿ ಸಲ್ಲಿಸಲು ಅಂತಿಮ ದಿನ- ಆಗಸ್ಟ್ 31
ಶಿವಮೊಗ್ಗ:
ಅಂಗನವಾಡಿ ಕಾರ್ಯಕರ್ತರು - 127
ಅಂಗನವಾಡಿ ಸಹಾಯಕರು - 448
ಅರ್ಜಿ ಸಲ್ಲಿಸಲು ಅಂತಿನ ದಿನ - ಆಗಸ್ಟ್ 29
ಧಾರವಾಡ:
ಅಂಗನಾಡಿ ಕಾರ್ಯಕರ್ತರು - 9
ಅಂಗನವಾಡಿ ಸಹಾಯಕಿಯರು - 190
ಅರ್ಜಿ ಸಲ್ಲಿಸಲು ಅಂತಿಮ ದಿನ - ಸೆಪ್ಟೆಂಬರ್ 2
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಆಯ್ಕೆ ಮಾಡಿ, ಬಳಿಕ ಯಾವ ಹುದ್ದೆ ಎಂಬುದನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬೇಕಿದೆ.
ಇದನ್ನೂ ಓದಿ: ಸಿ-ಡಾಕ್ ನೇಮಕಾತಿ: ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಸೇರಿ ಹಲವು ಹುದ್ದೆಗಳು